ಮಡಿಕೇರಿ, ಡಿ.೧ : ಪಾಠ-ಪ್ರವಚನಗಳೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರಮುಖರು ಕರೆ ನೀಡಿದರು.

ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಉದ್ಘಾಟನೆ ಮಾಡಿದ ಶಕ್ತಿ ದಿನಪತ್ರಿಕೆ ಹಿರಿಯ ಉಪ ಸಂಪಾದಕ ಕುಡೆಕಲ್ ಸಂತೋಷ್ ಮಾತನಾಡಿ; ಮಕ್ಕಳಲ್ಲಿ ಸಾಧಿಸುವ ಛಲ ಇರಬೇಕು, ಜೀವನದಲ್ಲಿ ಮುಂದೆ ಬರಬೇಕಾದರೆ ವಿದ್ಯೆಯೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಪ್ರತಿಯೋರ್ವರಲ್ಲೂ ಪ್ರತಿಭೆ ಇರುತ್ತದೆ, ಅದನ್ನು ಹೊರ ಹಾಕುವದರ ಮೂಲಕ ಸಾಧನೆ ಮಾಡಬೇಕು. ಮಕ್ಕಳೆಂದ ಮೇಲೆ ತುಂಟಾಟ ಇದ್ದೇ ಇರುತ್ತದೆ, ಅದನ್ನೆಲ್ಲ ಮೆಟ್ಟಿ ನಿಂತು ಮುಂದೆ ಬರಬೇಕು ಎಂದು ಹೇಳಿದರು. ಗುರಿಯ ಹಿಂದೆ ಗುರುಗಳಿದ್ದಾರೆ ಎಂಬ ಮಾತಿನಂತೆ ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸಬೇಕು, ಪ್ರಸ್ತುತ ಮೊಬೈಲ್ ಅನಿವಾರ್ಯವಾಗಿದ್ದು, ಅದರಲ್ಲಿನ ಉತ್ತಮ ಮಾಹಿತಿಗಳನ್ನು ಪಡೆದುಕೊಂಡು ಕ್ರಿಯಾತ್ಮಕ ಚಟುವಟಿಕೆಗಳತ್ತ ಆಸಕ್ತಿ ತೋರುವದರೊಂದಿಗೆ ವಿದ್ಯೆ ನೀಡಿದ ಶಾಲೆಗೆ, ಹುಟ್ಟು ನೀಡಿದ ನಾಡಿಗೆ ಕೀರ್ತಿ ತರಬೇಕು, ಸಾಧ್ಯವಾದಷ್ಟು ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಜ್ಞಾನ ಸಂಪಾದನೆಯಾಗಲಿದೆ ಎಂದು ಹೇಳಿದರು.

ತಾಯಿ-ಮಕ್ಕಳ ಹಬ್ಬ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ಕ್ಲಸ್ಟರ್‌ನ ಸಿಆರ್‌ಪಿ ಮಡಿಕೇರಿ, ಡಿ.೧ : ಪಾಠ-ಪ್ರವಚನಗಳೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರಮುಖರು ಕರೆ ನೀಡಿದರು.

ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಉದ್ಘಾಟನೆ ಮಾಡಿದ ಶಕ್ತಿ ದಿನಪತ್ರಿಕೆ ಹಿರಿಯ ಉಪ ಸಂಪಾದಕ ಕುಡೆಕಲ್ ಸಂತೋಷ್ ಮಾತನಾಡಿ; ಮಕ್ಕಳಲ್ಲಿ ಸಾಧಿಸುವ ಛಲ ಇರಬೇಕು, ಜೀವನದಲ್ಲಿ ಮುಂದೆ ಬರಬೇಕಾದರೆ ವಿದ್ಯೆಯೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಪ್ರತಿಯೋರ್ವರಲ್ಲೂ ಪ್ರತಿಭೆ ಇರುತ್ತದೆ, ಅದನ್ನು ಹೊರ ಹಾಕುವದರ ಮೂಲಕ ಸಾಧನೆ ಮಾಡಬೇಕು. ಮಕ್ಕಳೆಂದ ಮೇಲೆ ತುಂಟಾಟ ಇದ್ದೇ ಇರುತ್ತದೆ, ಅದನ್ನೆಲ್ಲ ಮೆಟ್ಟಿ ನಿಂತು ಮುಂದೆ ಬರಬೇಕು ಎಂದು ಹೇಳಿದರು. ಗುರಿಯ ಹಿಂದೆ ಗುರುಗಳಿದ್ದಾರೆ ಎಂಬ ಮಾತಿನಂತೆ ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸಬೇಕು, ಪ್ರಸ್ತುತ ಮೊಬೈಲ್ ಅನಿವಾರ್ಯವಾಗಿದ್ದು, ಅದರಲ್ಲಿನ ಉತ್ತಮ ಮಾಹಿತಿಗಳನ್ನು ಪಡೆದುಕೊಂಡು ಕ್ರಿಯಾತ್ಮಕ ಚಟುವಟಿಕೆಗಳತ್ತ ಆಸಕ್ತಿ ತೋರುವದರೊಂದಿಗೆ ವಿದ್ಯೆ ನೀಡಿದ ಶಾಲೆಗೆ, ಹುಟ್ಟು ನೀಡಿದ ನಾಡಿಗೆ ಕೀರ್ತಿ ತರಬೇಕು, ಸಾಧ್ಯವಾದಷ್ಟು ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಜ್ಞಾನ ಸಂಪಾದನೆಯಾಗಲಿದೆ ಎಂದು ಹೇಳಿದರು.

ತಾಯಿ-ಮಕ್ಕಳ ಹಬ್ಬ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ಕ್ಲಸ್ಟರ್‌ನ ಸಿಆರ್‌ಪಿ