ಮಡಿಕೇರಿ, ಡಿ. ೧: ಮಕ್ಕಳ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಸ್ಪರ್ಧಾ ಕಾರ್ಯಕ್ರಮದಲ್ಲಿ ೮ ಮಂದಿ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.
ರಾಜ್ಯ ಬಾಲಭವನ ಸೊಸೈಟಿ ಕಬ್ಬನ್ ಪಾರ್ಕ್ ಇಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ರಾಜ್ಯಮಟ್ಟದ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಮೂರು ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷಿö್ಮÃ ಆರ್. ಹೆಬ್ಬಾಳ್ಕರ್ ಅವರು ಪ್ರಧಾನ ಮಾಡಿ ಶುಭ ಹಾರೈಸಿದ್ದಾರೆ.
ಪ್ರಶಸ್ತಿ ಪಡೆದವರ ವಿವರ: ಜಾನಪದ (ನೃತ್ಯ) ವಿಭಾಗದಲ್ಲಿ ಮಡಿಕೇರಿ ಸಂತ ಜೋಸೆಫರ ಶಾಲೆಯ ೫ನೇ ತರಗತಿಯ ಬಿ.ಎಸ್. ಅನಘ (ಪ್ರಥಮ), ವಿಜ್ಞಾನದಲ್ಲಿ ನೂತನ ಆವಿಷ್ಕಾರ ವಿಭಾಗದಲ್ಲಿ ಮಡಿಕೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿಯ ಹೆಚ್.ಆರ್. ಶಿವಕುಮಾರ್ (ದ್ವಿತೀಯ), ಭರತನಾಟ್ಯ (ನೃತ್ಯ) ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ೬ನೇ ತರಗತಿಯ ಸಿ.ಹೆಚ್. ದಿಶಿಕಾ (ತೃತೀಯ) ಸ್ಥಾನ ಪಡೆದಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.