ಮಡಿಕೇರಿ, ಡಿ. ೧: ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು (ಪಿಎಂಎಫ್‌ಎAಇ) ೨೦೨೦-೨೧ ರಿಂದ ಪ್ರಾರಂಭವಾಗಿರುತ್ತದೆ.
ಈ ಯೋಜನೆಯಲ್ಲಿ ಅಸಂಘಟಿತ ವಲಯದಲ್ಲಿರುವ ಸೂಕ್ಷö್ಮ-ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಅವುಗಳ ಸರಪಳಿಕೊಂಡಿಯೊAದಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
೧೮ ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು ಹಾಗೂ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿ ಇರುವುದಿಲ್ಲ. ಅರ್ಹ ಯೋಜನಾ ವೆಚ್ಚದ ಶೇ. ೩೫ ರಷ್ಟು ಮೌಲ್ಯದ ಸಾಲ-ಸಂಪರ್ಕವಿರುವ ಸಹಾಯಧನ (ಕ್ರೆಡಿಟ್ ಬೇಸ್‌ಡ್ ಸಬ್ಸಿಡಿ) ಜೊತೆಗೆ ಹೆಚ್ಚುವರಿ ಶೇ. ೧೫ ರಷ್ಟು ರಾಜ್ಯ ಸರ್ಕಾರದಿಂದ ಸಹಾಯಧನ ಒದಗಿಸಲಾಗುವುದು (ಗರಿಷ್ಠ ಮಿತಿ ೧೫ ಲಕ್ಷ), ಬ್ರಾಂಡಿAಗ್ ಮತ್ತು ಮಾರುಕಟ್ಟೆ ಚಟುವಟಿಕೆಗಳಾದ ಪ್ಯಾಕೇಜಿಂಗ್, ಜಾಹೀರಾತು, ಸಾಮಾನ್ಯ ಬ್ರಾಂಡ್ ಅಭಿವೃದ್ಧಿ, ಚಿಲ್ಲರೆ ಮಾರಾಟ ಸಂಸ್ಥೆಗಳೊAದಿಗೆ ಒಡಂಬಡಿಕೆ ಇತ್ಯಾದಿಗಳಿಗೆ ಸರ್ಕಾರದಿಂದ ಶೇ. ೫೦ ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತ ಫಲಾನುಭವಿಗಳು ಪೋರ್ಟಲ್ hಣಣಠಿ://ಠಿmಜಿme.moಜಿಠಿi.gov.iಟಿ ಮೂಲಕ ಅರ್ಜಿ ನೋಂದಾಯಿಸಬಹುದು ಹಾಗೂ ಫಲಾನುಭವಿಗಳ ದಾಖಲೆಗಳ ಕ್ರೋಢೀಕರಣ, ವಿಸ್ತೃತ ಯೋಜನಾ ವರದಿ ತಯಾರಿಕೆ ಹಾಗೂ ಇತರೆ ಮಾರ್ಗದರ್ಶನಕ್ಕಾಗಿ ಈ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾದ ಕೆ.ಜಿ. ನೀರಜಾ ದೂ. ೮೮೬೧೪೨೨೫೪೦ನ್ನು ಹಾಗೂ ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಪಿಎಂಎಫ್‌ಎAಇ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸ ಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.