ನಾಪೋಕ್ಲು, ಡಿ. ೧: ತಲೆ ತಲಾಂತರಗಳಿAದ ಉಳಿಸಿಕೊಂಡು ಬಂದಿರುವ ಸಂಸ್ಕೃತಿ, ಸಂಪ್ರದಾಯ ಗಳನ್ನು ಮುಂದಿನ ತಲೆಮಾರಿಗೂ ವರ್ಗಾಯಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ಕನ್ನಡ ಜಾನಪದ ಪರಿಷತ್ ಕೊಡಗು ಜಿಲ್ಲೆ ಹಾಗೂ ಬುಡಕಟ್ಟು ಕೃಷಿಕರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸಮೀಪದ ಯವಕಪಾಡಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸುವರ್ಣ ಕನ್ನಡ ಜಾನಪದ ಸಂಭ್ರಮ ಹಾಗೂ ವಿಶ್ವ ಬುಡಕಟ್ಟು ದಿನಾಚರಣೆ, ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಪೋಕ್ಲು ಪದವಿ ಕಾಲೇಜು ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನಪದ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಕಲಾವಿದ ಪೊನ್ನಪ್ಪ ವಹಿಸಿದ್ದರು.
ಕಾರ್ಯಕ್ರಮದಲ್ಲಿ ತೋರ ಗ್ರಾಮದ ಹಿರಿಯ ಜಾನಪದ ಕಲಾವಿದೆ ಗೋಪಮ್ಮ, ದುಡಿಕೊಟ್ಟ್ ಕಲಾವಿದೆ ಕೆ.ಸಿ. ದೇವಕ್ಕಿ, ಯವಕಪಾಡಿ ಗ್ರಾಮದ ಹಿರಿಯ ಜಾನಪದ ಕಲಾವಿದ ಕೆ.ಸಿ. ಸೋಮಣ್ಣ, ಮರಂದೋಡ ಗ್ರಾಮದ ಕೊಳಲು ವಾದಕ ಕೆ. ಮಾದಪ್ಪ ಹಾಗೂ ಮರಂದೋಡ ಗ್ರಾಮದ ಸಾಹಿತಿ ಮೋಹನ್ ಮಾದಪ್ಪ ಅವರನ್ನು ಸನ್ಮಾನಿಸಲಾಯಿತು. ಅತೀ ಹೆಚ್ಚು ಅಂಕ ಪಡೆದ ಬುಡಕಟ್ಟು ಸಮುದಾಯದ ಟೀನಾ, ನಮೃತಾ ಹಾಗೂ ವರ್ಷಿಣಿ ಅವರನ್ನು ಸನ್ಮಾನಿಸಲಾಯಿತು. ಮೈಸೂರಿನ ಶ್ರೀ ಓಂ ಸಾಯಿ ಟ್ರಸ್ಟಿನ ಡಾ. ಪ್ರಾಣಿ ಪ್ರಭ, ಮೈಸೂರು ಕನ್ನಡ ಜಾನಪದ ಪರಿಷತ್ತಿನ ಜಂಟಿ ಕಾರ್ಯದರ್ಶಿ ಡಾ. ರವಿಶಂಕರ್, ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪಾಧ್ಯಕ್ಷೆ ಕಾಂಡAಡ ಉಷಾ ಜೋಯಪ್ಪ, ಮಡಿಕೇರಿ ವೈದ್ಯಕೀಯ ಕಾಲೇಜಿನ ನಿವೃತ್ತ ಆಡಳಿತಾಧಿಕಾರಿ ಬಿದ್ದಾಟಂಡ ಮೇರಿ ನಾಣಯ್ಯ ಉಪಸ್ಥಿತರಿದ್ದರು. ‘ಕುಡಿಯರ ಸಮುದಾಯದಲ್ಲಿ ಕನ್ನಡ’ ಎಂಬ ವಿಷಯದ ಕುರಿತು ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸದಸ್ಯ ಸುಭಾಷ್ ಚಂದ್ರ ದೇವಯ್ಯ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಯಶೋಧ ನಿರೂಪಿಸಿದರು. ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ ವಂದಿಸಿದರು.