'
ಕುಶಾಲನಗರ, ಡಿ. ೧: ಕುಶಾಲನಗರ ಶ್ರೀ ಗಣಪತಿ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನ ಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ಭಕ್ತಿ ಭಾವದೊಂದಿಗೆ ನಡೆಯಿತು.
ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ, ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆ ಗಳೊಂದಿಗೆ ಭಕ್ತಿಭಾವದಿಂದ ಎಳೆದರು.
ದೇವಾಲಯದ ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು, ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿAದ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು.
ಅಯ್ಯಪ್ಪ ಸ್ವಾಮಿ ದೇವರ ಮಾಲಾಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು. ಭಕ್ತರು ತಮ್ಮ ಹರಕೆಯ ಹೆಸರಿನಲ್ಲಿ ತಮಗಿಷ್ಟ ಬಂದಷ್ಟು ಈಡುಗಾಯಿಯನ್ನು ಒಡೆದು ಪ್ರಾರ್ಥಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥÀರ್ ಗೌಡ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಶ್ರೀ ಗಣಪತಿ ದೇವಾಲಯ ಸಮಿತಿ ಗೌರವಾಧ್ಯಕ್ಷ ವಿ.ಎನ್. ವಸಂತಕುಮಾರ್ ರಥೋತ್ಸವ ಅದ್ಧೂರಿಯಾಗಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ರಥೋತ್ಸವದ ಅಂಗವಾಗಿ
(ಮೊದಲ ಪುಟದಿಂದ) ಅನ್ನದಾನ ಸಮಿತಿ ಮೂಲಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಯಿತು. ಪ್ರತಿದಿನ ಉತ್ಸವವಾದಿಗಳು ವರ್ಷಂಪ್ರತಿಯAತೆ ನಡೆಯುತ್ತದೆ. ಗುಂಡೂರಾವ್ ಜಾತ್ರಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ದೇವಾಲಯ ಸೇವಾ ಸಮಿತಿಯ ಕಾರ್ಯಕಾರಿ ಮಂಡಳಿ ಕಾರ್ಯಾಧ್ಯಕ್ಷ ಎಂ.ಕೆ. ದಿನೇಶ್, ಉಪಾಧ್ಯಕ್ಷ ಆರ್. ಬಾಬು, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ನಿರ್ದೇಶಕರಾದ ವಿ.ಡಿ. ಪಂಡರಿಕಾಕ್ಷ, ವಿ.ಪಿ. ಶಶಿಧರ್, ಜಿ.ಎಲ್. ನಾಗರಾಜ್, ಎಂ.ವಿ. ನಾರಾಯಣ್, ಟಿ.ಆರ್. ಶರವಣಕುಮಾರ್ ಮತ್ತು ವ್ಯವಸ್ಥಾಪಕರಾದ ಎಸ್.ಕೆ. ಶ್ರೀನಿವಾಸ್ ರಾವ್ ಇದ್ದರು.
ಕುಶಾಲನಗರ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ನೇತೃತ್ವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಈ ಸಂದರ್ಭ ಪ್ರತಿಕ್ರಿಯಿಸಿದ ಶಾಸಕ ಮಂಥರ್ ಗೌಡ, ಗುಂಡೂರಾವ್ ಬಡಾವಣೆಯಲ್ಲಿ ಗಣಪತಿ ಜಾತ್ರೋತ್ಸವ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಪ್ರಸಕ್ತ ಇರುವ ಸ್ಥಳವನ್ನು ಸಂಬAಧಿಸಿದ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮೀಸಲಿರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.