ಚೆಯ್ಯಂಡಾಣೆ, ಡಿ. ೧: ನರಿಯಂದಡ ಗ್ರಾಮ ಪಂಚಾಯಿತಿಯ ೨೦೨೩-೨೪ನೇ ಸಾಲಿನ ಮೊದಲ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯು ತಾ.೪ರಂದು ಪೂರ್ವಾಹ್ನ ೧೧ ಗಂಟೆಗೆ ಮಡಿಕೇರಿ ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಗ್ರಾ. ಪಂ. ಅಧ್ಯಕೆÀ್ಷ ಪೆಮ್ಮಂಡ ಕೌಶಿ ಕಾವೇರಮ್ಮ ಉಪಸ್ಥಿತಿಯಲ್ಲಿ, ಉಪಾಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾಕುಮಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.