ಮಡಿಕೇರಿ, ಡಿ. ೩: ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆ, ಬ್ರಹ್ಮಗಿರಿ ಸಹೋದಯ ವತಿಯಿಂದ ತಾ. ೪ ರಂದು ಅಂತರ ಸಿ.ಬಿ.ಎಸ್.ಇ. ಶಾಲಾ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟ ನಡೆಯಲಿದೆ.

ಬೆಳಿಗ್ಗೆ ೧೦ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟವನ್ನು ಜವಾಹರ ನವೋದಯ ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೆಗೌಡ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.