ಕುಶಾಲನಗರ, ಡಿ. ೩: ಪಾದಚಾರಿ ಒಬ್ಬನಿಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ತೀವ್ರ ಗಾಯಗೊಂಡ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಶನಿವಾರ ತಡರಾತ್ರಿಯಲ್ಲಿ ಘಟನೆ ನಡೆದಿದ್ದು ಗಾಯಾಳು ಹುಣಸೂರು ನಿವಾಸಿ ಸದೇಶ್ (೪೮) ಎಂಬಾತ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ಗಾಯಾಳು ಗಿಡಮೂಲಿಕೆ ಔಷಧಿ ಮಾರಾಟ ಮಾಡುತ್ತಿದ್ದು, ಬಸವನಹಳ್ಳಿ ಕಡೆಯಿಂದ ಬರುತ್ತಿದ್ದ ಸಂದರ್ಭ ಭಾಗಮಂಡಲದಿAದ ಕೆಜಿಎಫ್ ಕಡೆಗೆ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ ಎಂದು ಕುಶಾಲನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸದೇಶ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಂಚಾರಿ ಪೊಲೀಸ್ ಠಾಣಾಧಿಕಾರಿ ಕಾಶಿನಾಥ ಬಗಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬAಧಿಸಿದAತೆ ದೂರು ದಾಖಲಿಸಿದ್ದು ಸರ್ಕಾರಿ ಬಸ್ ಚಾಲಕನ ಮೇಲೆ ಕ್ರಮ ಕೈಗೊಳ್ಳಲಾಗಿದೆ.