ಮಡಿಕೇರಿ, ಡಿ. ೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ವಿಶೇಷಚೇತನರಿಗಾಗಿ ತಾ. ೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮಕ್ಕೂ ಮೊದಲು ತಾ.೩ ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ನಗರಸಭೆಯಿಂದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಕಾವೇರಿ ಕಲಾಕ್ಷೇತ್ರದವರೆಗೆ ವಿಕಲ ಚೇತನರಿಂದ ಜಾಥಾ ನಡೆಯಲಿದೆ.