ಮಡಿಕೇರಿ, ಡಿ. ೩: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು, ಸ್ಥಳೀಯ ಸಂಸ್ಥೆ ಸಂಪಾಜೆಯ ಸರಕಾರಿ ಪ್ರೌಢ ಶಾಲೆ, ಚೆಂಬುವಿನ ಭಗತ್ ಸಿಂಗ್ ಸ್ಕೌಟ್ ದಳದವರು ಒಂದು ದಿನದ ಸನಿವಾಸ ಶಿಬಿರವನ್ನು ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದರು.
ಶಿಬಿರದ ಉದ್ಘಾಟನೆಯನ್ನು ಶಾಲಾ ಮುಖ್ಯಶಿಕ್ಷಕಿ ಯಮುನಾ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ, ಗೈಡ್ಸ್ ಸಹಾಯಕ ಆಯುಕ್ತರಾದ ಸುಲೋಚನ, ಸಂಪನ್ಮೂಲ ವ್ಯಕ್ತಿ ಸ್ಕೌಟ್ ಮಾಸ್ಟರ್ ಕುಮಾರಸ್ವಾಮಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರಾದ ದಿನಕರ ಶೆಟ್ಟಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪುಷ್ಪಕಲಾ, ಸದಸ್ಯರಾದ ಶಿವರಾಮ, ಸುಮಿತ್ರ ನಿಡಿಂಜಿ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಯು.ಸಿ. ದಮಯಂತಿ ಅವರು ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದ್ದು, ಅದೆಷ್ಟೋ ಮಂದಿ ಉನ್ನತ ಹುದ್ದೆಗಳನ್ನು ಹೊಂದಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಸ್ವಾವಲಂಬಿಗಳಾಗಿ ಜೀವನ ನಡೆಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದು ತಿಳಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವೀರ ಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಂಜೆ ನಡೆದ ಶಿಬಿರಾಗ್ನಿ ಕಾರ್ಯಕ್ರಮವನ್ನು ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷರಾದ ಧನಂಜಯ ಎಂ. ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಉಷಾರಾಣಿ ಕೆ. ಬಿ, ರಮೇಶ್ ಉಪಸ್ಥಿತರಿದ್ದರು.
ಈ ಸಂದರ್ಭ ಸ್ಥಳೀಯ ಮತ್ತು ಚೆಂಬು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಸಿ. ಅಧ್ಯಕ್ಷರಾದ ರಮೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಹೊಸೂರ್, ಮುಖ್ಯ ಶಿಕ್ಷಕಿ ಯಮುನಾ, ಸಂಯೋಜಕರಾದ ಕುಮಾರಸ್ವಾಮಿ, ಶಿಕ್ಷಕಿ ಕಾಮಾಕ್ಷಿ, ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ದಿನಕರ ಶೆಟ್ಟಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪುಷ್ಪಕಲ, ಶಿವರಾಮ, ಪೋಷಕರಾದ ನಾಗಪ್ಪ ಉಪಸ್ಥಿತರಿದ್ದರು.
ಈ ಸಂದರ್ಭ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎರಡು ದಿನದ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಸಂಯೋಜಕರಾದ ರಂಜಿತ್ ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿ ಕಾರ್ಯಕ್ರಮ ನಿರೂಪಿಸಿದರು. ನಂತರ ಧ್ವಜಾವರೋಹಣ ಮಾಡುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊAಡಿತು. ಎರಡು ದಿನದ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಚೆಂಬು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದು ಸಹಕರಿಸಿದರು.