ಸೋಮವಾರಪೇಟೆ, ಡಿ. ೨: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿಯಲ್ಲಿ ಜ. ೨೨ ರಂದು ನಡೆಯಲಿರುವ ಶ್ರೀರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಮಂತ್ರಾಕ್ಷತೆ ವಿತರಣೆ ಮೂಲಕ ಆಮಂತ್ರಣ ನೀಡುವ ಕಾರ್ಯಕ್ರಮದಲ್ಲಿ ಆಂಜನೇಯ ದೇವಾಲಯ ಸಮಿತಿ ಪದಾಧಿಕಾರಿಗಳು ಮಂತ್ರಾಕ್ಷತೆಯನ್ನು ಪಡೆದುಕೊಂಡರು. ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್ ಅವರು ಸಮಿತಿಯ ಪರವಾಗಿ ಮಂತ್ರಾಕ್ಷತೆ ಸ್ವೀಕರಿಸಿದರು. ನಂತರ ದೇವಾಲಯದಲ್ಲಿ ಅರ್ಚಕ ನಂಜುAಡೇಶ್ವರ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ಪ್ರಮುಖರಾದ ಭಾರತೀಶ್, ಎಂ.ಬಿ. ಉಮೇಶ್, ಮಹೇಶ್ ತಿಮ್ಮಯ್ಯ, ಸಿ.ಸಿ. ನಂದ, ದರ್ಶನ್ ಜೋಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.