ಕ್ರೆöÊಸ್ತರ ಪ್ರಾರ್ಥನೆ ವೇಳೆ ಬಾಂಬ್ ದಾಳಿ-ನಾಲ್ಕು ಮಂದಿ ಸಾವು

ಮನಿಲಾ, ಡಿ. ೩: ಪ್ರಭಲ ಭೂಕಂಪದಿAದ ಸುನಾಮಿ ಭೀತಿ ಎದುರಿಸುತ್ತಿದ್ದ ಫಿಲಿಪಿನ್ಸ್, ಭಾನುವಾರ ಬೆಳಿಗ್ಗೆ ಭಯೋತ್ಪಾದಕರ ದಾಳಿಗೆ ನಲುಗಿದೆ. ದೇಶದ ದಕ್ಷಿಣ ಭಾಗದಲ್ಲಿರುವ ವಿಶ್ವವಿದ್ಯಾಲಯದ ಜಿಮ್ಯಾಷಿಯಮ್‌ನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಕ್ಯಾಥೊಲಿಕ್ ಕ್ರೆöÊಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಸಂಭವಿಸಿದ ಬಾಂಬ್ ದಾಳಿಯಲ್ಲಿ ಕನಿಷ್ಟ ನಾಲ್ಕು ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಮುಸ್ಲಿಂ ಭಯೋತ್ಪಾದಕರ ಕೃತ್ಯ ಎಂದು ಅಲ್ಲಿನ ಪೊಲೀಸರು ಹೇಳಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷ ಫರ್ಡಿನಂಡ್ ಮಾರ್ಕೊಸ್ ಜೂನಿಯರ್, ವಿದೇಶಿ ಭಯೋತ್ಪಾದಕರ ಪ್ರಜ್ಞಾಶೂನ್ಯ ಹಾಗೂ ಅತ್ಯಂತ ಹೇಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಮುಗ್ಧರ ಮೇಲೆ ಹಿಂಸಾಚಾರ ನಡೆಸಿರುವ ತೀವ್ರವಾದಿಗಳು ನಮ್ಮ ಸಮಾಜದ ಶತ್ರುಗಳೇ ಆಗಿದ್ದಾರೆ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ೨೦೧೭ರಲ್ಲಿ ಐದು ತಿಂಗಳ ಕಾಲ ಮುಸ್ಲಿಂ ಭಯೋತ್ಪಾದಕರ ಹಿಡಿತದಲ್ಲಿ ಸಿಲುಕಿದ್ದ ಮಾರವಾಯ್ ನಗರದಲ್ಲೇ ಭಾನುವಾರ ಬಾಂಬ್ ದಾಳಿ ನಡೆದಿದೆ. ಇದೇ ಪ್ರದೇಶದಲ್ಲಿ ದವಾಹ್ ಇಸ್ಲಾಮಿಯಾ ಭಯೋತ್ಪಾದಕ ಗುಂಪಿಗೆ ಸೇರಿದ ೧೧ ಜನರನ್ನು ಫಿಲಿಪಿನ್ಸ್ ಸೇನೆ ಶನಿವಾರ ಹತ್ಯೆಗೈದಿತ್ತು. ಜೊತೆಗೆ ೧೦ ಅತ್ಯಾಧುನಿಕ ಬಂದೂಕು ಹಾಗೂ ಮೂರು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದರು. ಅದೇ ಸ್ಥಳದಲ್ಲಿ ಭಾನುವಾರ ಬಾಂಬ್ ಸ್ಫೋಟಿಸಲಾಗಿದೆ. ದೇಶದ ನಾಗರಿಕರ ಸುರಕ್ಷತೆ ಹಾಗೂ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹಾಗೂ ಸೇನೆಗೆ ನಿರ್ದೇಶಿಸಲಾಗಿದೆ. ಇಂಥ ಕೃತ್ಯ ಎಸಗಿದವರನ್ನು ನ್ಯಾಯದ ಎದುರು ತರುತ್ತೇವೆ ಎಂದು ಮಾರ್ಕೊಸ್ ಜೂನಿಯರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಹೇಳಿದ್ದಾರೆ.

ರಾಜೀನಾಮೆ ಸಲ್ಲಿಸಿದ ಕೆ.ಸಿ.ಆರ್.

ಹೈದರಾಬಾದ್, ಡಿ. ೩: ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದರು. ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್‌ಎಸ್ ಸೋಲು ಕಂಡಿದೆ. ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕೆಸಿಆರ್ ಒಂದು ಸ್ಥಾನದಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿ ಸೋಲು ಅನುಭವಿಸಿದ್ದಾರೆ. ಗಜ್ವೆಲ್‌ನಲ್ಲಿ ಗೆದ್ದರೆ, ಕಾಮರೆಡ್ಡಿಯಲ್ಲಿ ಸೋತಿದ್ದಾರೆ.

ಜನತಾ ಜನಾರ್ಧನನಿಗೆ ನಮನ ಸಲ್ಲಿಸಿದ ಮೋದಿ

ನವದೆಹಲಿ, ಡಿ. ೩: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯೊಂದಿಗೆ ಜನರು ದೃಢವಾಗಿದ್ದಾರೆ ಎಂದು ಸೂಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ ಬಳಿಕ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊAಡಿರುವ ಅವರು, ಜನತಾ ಜನಾರ್ಧನನಿಗೆ ನನ್ನ ನಮನ. ಮೂರು ರಾಜ್ಯಗಳ ಜನತೆಯ ಅವಿರತ ಬೆಂಬಲಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜನರ ಯೋಗಕ್ಷೇಮಕ್ಕಾಗಿ ನಾವು ಶ್ರಮಿಸುತ್ತೇವೆ ಎಂದು ಭರವಸೆ ನೀಡುತ್ತೇನೆ. ಪಕ್ಷಕ್ಕಾಗಿ ಶ್ರಮಿಸುತ್ತಿರುವ ಕಾರ್ಯಕರ್ತರಿಗೆ ವಿಶೇಷ ಧನ್ಯವಾದಗಳು. ಪ್ರತಿಯೊಬ್ಬರೂ ಅನುಕರಣೀಯರು! ಅವರು ಅವಿರತವಾಗಿ ಶ್ರಮಿಸಿದ್ದಾರೆ ಮತ್ತು ನಮ್ಮ ಅಭಿವೃದ್ಧಿಯನ್ನು ಎತ್ತಿ ತೋರಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಮುAದುವರೆಯಲಿದೆ ಸೈದ್ಧಾಂತಿಕ ಹೋರಾಟ-ರಾಹುಲ್

ನವದೆಹಲಿ, ಡಿ. ೩: ಐದು ರಾಜ್ಯಗಳ ಚುನಾವಣೆಗಳಲ್ಲಿ ಇಂದು ಪ್ರಕಟವಾದ ನಾಲ್ಕು ರಾಜ್ಯಗಳ ಚುನಾವಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರತಿಕ್ರಿಯೆ ಹಂಚಿಕೊAಡಿದ್ದಾರೆ. ‘ಎಕ್ಸ್’ನಲ್ಲಿ ತಮ್ಮ ಅನಿಸಿಕೆ ಹಂಚಿಕೊAಡಿರುವ ಅವರು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳ ಚುನಾವಣೆಯಲ್ಲಿ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದಿದ್ದಾರೆ. ಅದರ ಜೊತೆಯಲ್ಲೇ ನಾವು ನಡೆಸುತ್ತಿರುವ ಸೈದ್ಧಾಂತಿಕ ಹೋರಾಟವು ಮುಂದುವರಿಯಲಿದೆ. ತೆಲಂಗಾಣದ ಜತೆಗೆ ಧನ್ಯವಾದಗಳು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆಯಲ್ಲಿ ಅದ್ಭುತವಾಗಿ ಕೆಲಸ ಮಾಡಿ ಪಕ್ಷವನ್ನು ಬೆಂಬಲಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಎಂದಿದ್ದಾರೆ.

ತೆಲAಗಾಣದ ಡಿಜಿ ಮತ್ತು ಐ.ಜಿ.ಪಿ. ಅಮಾನತ್ತು

ಹೈದ್ರಾಬಾದ್, ಡಿ. ೩: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಶುಭಾಶಯ ಕೋರಿದ್ದರು. ಇದು ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಆಯೋಗ, ತಕ್ಷಣವೇ ಜಾರಿಗೆ ಬರುವಂತೆ ಡಿಜಿ ಮತ್ತು ಐಜಿಪಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇಂದಿನಿAದ ಬೆಳಗಾವಿ ಅಧಿವೇಶನ

ಬೆಳಗಾವಿ, ಡಿ. ೩: ತಾ. ೪ ರಿಂದ (ಇಂದಿನಿAದ) ೧೦ ದಿನಗಳವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಸಿದ್ಧತೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಜಂಟಿಯಾಗಿ ಪರಿಶೀಲನೆ ನಡೆಸಿದರು. ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಆಸನಗಳ ವ್ಯವಸ್ಥೆ, ಧ್ವನಿ ವ್ಯವಸ್ಥೆ ಪರೀಕ್ಷಿಸಿದ ಅವರು, ಯಾವುದೇ ತಾಂತ್ರಿಕ ತೊಂದರೆಯುAಟಾಗದAತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಕಾರ್ಯದರ್ಶಿ ಸೇರಿದಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್, ಬೆಳಗಾವಿ ಅಧಿವೇಶನದಲ್ಲಿ ನಾಡಿನ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕುರಿತು ಅರ್ಥಪೂರ್ಣ ಚರ್ಚೆಗೆ ಉತ್ತಮ ಅವಕಾಶ ಕಲ್ಪಿಸಲಾಗುವುದು, ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಚರ್ಚೆಗೆ ಅವಕಾಶ ನೀಡಲಾಗುವುದು ಎಂದರು. ಸದ್ಯ ಮೂರು ಬಿಲ್ಲುಗಳು ಬಂದಿವೆ. ಅವುಗಳ ಬಗ್ಗೆ ಚರ್ಚೆ ನಡೆಸಿ ಅನುಮೋದಿಸಲಾಗುವುದು, ಕಲಾಪ ವೀಕ್ಷಣೆಗೆ ಬರುವ ಶಾಲಾ ಮಕ್ಕಳಿಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು. ಕಲಾಪ ವೀಕ್ಷಣೆಯ ಮುಂಚೆ ಅವರೊಂದಿಗೆ ಸಂವಿಧಾನ ಹಾಗೂ ರಾಜಕೀಯ ಆಡಳಿತಾತ್ಮಕ ಆಶೋತ್ತರ ಬಗ್ಗೆ ಸಂವಾದ ನಡೆಸಲು ವ್ಯವಸ್ಥೆ ಮಾಡಲಾಗುವುದು. ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

‘ತೆಲಂಗಾಣ ಗೆಲುವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸಂಕೇತ’

ಹೈದರಾಬಾದ್, ಡಿ. ೩: ತೆಲಂಗಾಣ ಚುನಾವಣಾ ಫಲಿತಾಂಶವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವುದರ ಸಂಕೇತ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ಹಾಗೂ ಮತದಾರರು ಬದಲಾವಣೆ ತರಲು ತೀರ್ಮಾನ ಮಾಡಿದ್ದರು. ಹೀಗಾಗಿ ತೆಲಂಗಾಣದಲ್ಲಿ ನಿಚ್ಚಳ ಬಹುಮತ ಸಿಕ್ಕಿದೆ. ಕರ್ನಾಟಕ, ಮಹಾರಾಷ್ಟç ಸೇರಿದಂತೆ ನೆರೆ ರಾಜ್ಯಗಳ ನಮ್ಮ ನಾಯಕರು ಇಲ್ಲಿ ಪ್ರತಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಚುನಾವಣೆ ಫಲಿತಾಂಶದ ನಂತರ ಮುಂದಿನ ಕ್ರಮಗಳ ಬಗ್ಗೆ ನಾವು ಎಚ್ಚರಿಕೆಯಿಂದ ಇದ್ದೇವೆ. ಎಂದರು. ‘ಈ ಗೆಲುವನ್ನು ನಿಮ್ಮ ವೈಯಕ್ತಿಕ ಗೆಲುವು ಎಂದು ಭಾವಿಸುತ್ತೀರಾ' ಎಂಬ ಪ್ರಶ್ನೆಗೆ, ಖಂಡಿತ ಇಲ್ಲ. ಇದು ನನ್ನ ವೈಯಕ್ತಿಕ ಗೆಲುವಲ್ಲ. ಇದು ತೆಲಂಗಾಣ ರಾಜ್ಯದ ಜನರ ಗೆಲುವು ಎಂದರು.