ಮಡಿಕೇರಿ, ಡಿ. ೩: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೭ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ಡಿ.೬ ರಂದು ಮಡಿಕೇರಿಯಲ್ಲಿ ನಡೆಯಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಆಸಕ್ತರು ಪಾಲ್ಗೊಂಡು ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಮಾಡಬಹುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ದೇವದಾಸ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಪವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಉದ್ಘಾಟಿಸಲಿದ್ದಾರೆ.

ಹೆಚ್.ಎಲ್.ದಿವಾಕರ್ ಪ್ರಾಸ್ತವಿಕ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ಜಿಲ್ಲಾ ಆಸ್ಪತ್ರೆಯ ಶಸ್ತç ಚಿಕಿತ್ಸಕ ಡಾ.ನಂಜುAಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್ ಅಂಬೆಕಲ್ಲು, ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಮಧುಕರ್ ಶೆಟ್ಟಿ, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂತೋಷ್ ಕುಮಾರ್ ಹಾಗೂ ನಗರ ಸಂಚಾಲಕ ಲೋಕನಾಥ್ ಪಾಲ್ಗೊಳ್ಳಲಿದ್ದಾರೆ.

ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಮಾಡಲು ಆಸಕ್ತಿ ಇರುವವರು ೯೪೮೧೫೨೩೬೪೮, ೯೬೧೧೭೬೬೭೧೩ ನ್ನು ಸಂಪರ್ಕಿಸಬಹುದಾಗಿದೆ.