ಸಿದ್ದಾಪುರ, ಡಿ. ೨: ಅಂಬೇಡ್ಕರ್ ಸೇನೆ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಾಲ್ದಾರೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಂವಿಧಾನ ದಿನ ಆಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಅಂಬೇಡ್ಕರ್ ಸೇನೆಯ ಕೊಡಗು ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಪಂಚದ ಅತಿದೊಡ್ಡ ಸಂವಿಧಾನವಾದ ಭಾರತದ ಸಂವಿಧಾನ ಲಿಖಿತ ರೂಪದಲ್ಲಿ ಇದ್ದು ಎಲ್ಲರಿಗೂ ಸಮಾನತೆ ಗೌರವವನ್ನು ಕೊಟ್ಟಿರುವಂತಹ ವಿಶ್ವದ ಏಕೈಕ ಸಂವಿಧಾನ ಎಂದರು, ಸಂವಿಧಾನದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವನ್ನು ನೀಡಿರುವುದರಿಂದ ಮಹಿಳೆಯರು ಎಲ್ಲಾ ರಂಗದಲ್ಲೂ ಮುಂದೆ ಬಂದಿರುವುದು ನಮ್ಮ ಸಂವಿಧಾನದ ಕೊಡುಗೆ ಆಗಿದೆ. ಪ್ರತಿಯೊಬ್ಬರೂ ಸಂವಿಧಾನವನ್ನ ಓದುವ ಮೂಲಕ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕೆಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಕಾರ್ಯಕ್ರಮದಲ್ಲಿ ಮಾಲ್ದಾರೆ ಶಾಲೆಯ ವಿದ್ಯಾರ್ಥಿಗಳು ಸಂವಿಧಾನದ ಪೂರ್ವ ಪೀಠಿಕೆಯನ್ನು ಓದುವ ಮೂಲಕ ಗಮನ ಸೆಳೆದರು
ಸಮಾರಂಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಮಂಜು, ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು, ವೀರಾಜಪೇಟೆ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಗಸ್ಟೀನ್, ವೀರಾಜಪೇಟೆ ತಾಲೂಕು ಉಪಾಧ್ಯಕ್ಷ ತಿಮ್ಮಣ್ಣ, ಪ್ರಮುಖರಾದ ದೀಪು ಹಂಚಿತ್ತಿಟ್ಟು, ಹರೀಶ್ ಕೂಡ್ಲೂರು, ಗಣೇಶ್ ಗದ್ದೆಮನೆ, ಅರುಣ್, ರೇಖಾ ಜನಪರ ಸಂಘಟನೆಯ ಅಧ್ಯಕ್ಷ ಭಾವ ಮಾಲ್ದಾರೆ, ಓಡಿಪಿ ಸಂಸ್ಥೆಯ ಪ್ರಮುಖರಾದ ಧನು ಕುಮಾರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.