ಮಡಿಕೇರಿ, ಡಿ. ೩: ಕಾಂತರಾಜ್ ವರದಿ ಅಂಗೀಕರಿಸಬೇಕು, ೨ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿರುವ ಮೀಸಲು ಪ್ರಮಾಣವನ್ನು ಶೇ. ೮ಕ್ಕೆ ಏರಿಸಬೇಕು ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ ಪ್ರಮುಖರು, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಈ ಕುರಿತು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಕೋರಿದರು.
ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ಲ ಅಡ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೋಶಾಧಿಕಾರಿ ಮನ್ಸೂರ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಕೊಂಡAಗೇರಿ, ಇಬ್ರಾಹಿಂ, ಷರೀಫ್ ವೀರಾಜಪೇಟೆ ಉಪಸ್ಥಿತರಿದ್ದರು.