ಚೆಟ್ಟಳ್ಳಿ, ಡಿ. ೨: ಚುನಾವಣಾ ಸಮಯದಲ್ಲಿ ಮಾತ್ರ ರಾಜಕಾರಣ ಮಾಡೋಣ. ಇನ್ನುಳಿದ ಸಮಯದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಚಿಂತನೆಯಡಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅಭಿಮತ ವ್ಯಕ್ತಪಡಿಸಿದರು.
ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಪರಿಹಾರದ ಭರವಸೆ ನೀಡಿದರು.
ಹದಗೆಟ್ಟ ರಸ್ತೆ, ವಸತಿ ರಹಿತರಿಗೆ ನಿವೇಶನ, ಕಂದಾಯ ಇಲಾಖೆಯಲ್ಲಿನ ಸಮಸ್ಯೆ, ನೆಟ್‌ವರ್ಕ್ ತೊಡಕು, ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ, ಸಮರ್ಪಕವಾಗಿ ದೊರೆಯದ ಆ್ಯಂಬ್ಯುಲೆನ್ಸ್ ಸೇವೆ, ಮಹಿಳೆಯರಿಗೆ ತಲುಪದ ಭಾಗ್ಯಲಕ್ಷಿö್ಮ ಯೋಜನೆ, ಸರಕಾರಿ ಶಾಲೆಗಳ ಉನ್ನತೀಕರಣ, ಜಾಗದ ದಾಖಲಾತಿ ಸಮಸ್ಯೆ, ಬಸ್ ವ್ಯವಸ್ಥೆ, ಕಾಡಾನೆ ಹಾವಳಿ.... ಹೀಗೆ ಹತ್ತು ಹಲವು ಸಮಸ್ಯೆಗಳ ಕುರಿತು ಜನರು ಶಾಸಕರ ಗಮನ ಸೆಳೆದರು.
ಕೃಷಿ, ತೋಟಗಾರಿಕೆ, ಶಿಕ್ಷಣ, ಕಂದಾಯ, ವಿದ್ಯುತ್, ಮೀನುಗಾರಿಕೆ, ಪಂಚಾಯತ್ ರಾಜ್, ಅರಣ್ಯ, ಪೊಲೀಸ್, ವೈದಕೀಯ ಸೇರಿದಂತೆ ಹಲವು ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯ ಜನತೆಯ ಸಮಸ್ಯೆಯನ್ನು ಆಲಿಸಿದ ಶಾಸಕ ಮಂಥರ್ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು. ಪಿಡಬ್ಲೂö್ಯಡಿ ಅಧಿಕಾರಿಗಳು ಸೇರಿದಂತೆ ಕೆಲವು ಅಧಿಕಾರಿಗಳು ಸಭೆಗೆ ಗೈರು ಹಾಜ ರಾಗಿದ್ದು, ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಶಿಸ್ತು ಕ್ರಮಕೈಗೊಳ್ಳುವಂತೆ ಕುಶಾಲನಗರ ತಹಶೀಲ್ದಾರ್‌ಗೆ ಶಾಸಕರು ನಿರ್ದೇಶಿಸಿದರು. ಚೆಟ್ಟಳ್ಳಿ-ಮಡಿಕೇರಿ ಮುಖ್ಯ ರಸ್ತೆ ತೀರ ಹದಗೆಟ್ಟಿದ್ದಲ್ಲದೆ ತಡೆಗೋಡೆ ಕುಸಿದು ಅಪಾಯಕಾರಿ ಸ್ಥಿತಿಯ ಬಗ್ಗೆ ನಾಗರಿಕರು ಶಾಸಕರ ಗಮನ ಸೆಳೆದರು.
ಅಧಿಕಾರಿಗಳು ಸಭೆಗೆ ಗೈರು ಹಾಜ ರಾಗಿದ್ದು, ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಶಿಸ್ತು ಕ್ರಮಕೈಗೊಳ್ಳುವಂತೆ ಕುಶಾಲನಗರ ತಹಶೀಲ್ದಾರ್‌ಗೆ ಶಾಸಕರು ನಿರ್ದೇಶಿಸಿದರು. ಚೆಟ್ಟಳ್ಳಿ-ಮಡಿಕೇರಿ ಮುಖ್ಯ ರಸ್ತೆ ತೀರ ಹದಗೆಟ್ಟಿದ್ದಲ್ಲದೆ ತಡೆಗೋಡೆ ಕುಸಿದು ಅಪಾಯಕಾರಿ ಸ್ಥಿತಿಯ ಬಗ್ಗೆ ನಾಗರಿಕರು ಶಾಸಕರ ಗಮನ ಸೆಳೆದರು.
ಆ್ಯಂಬ್ಯುಲೆನ್ಸ್ ವ್ಯವಸ್ಥೆಯ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅತೀ ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ ರಸ್ತೆಗೆ ಬಿಡುಗಡೆಯಾದ ಹಣವನ್ನು ಬೇರೆಡೆಗೆ ವರ್ಗಾಯಿಸಿದ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದರು.
ವೇದಿಕೆಯಲ್ಲಿ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಾರ್ಯನಿರ್ವಹಣಾ ಅಧಿಕಾರಿ ಜಯಣ್ಣ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ. ಸಿಂಧು, ಉಪಾಧ್ಯಕ್ಷೆ ಪಿ.ಡಿ. ತಂಗಮ್ಮ, ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಜರಿದ್ದರು. -ಕರುಣ್ ಕಾಳಯ್ಯ