ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮುಕ್ಕಾಟಿರ ಸುನಿಲ್ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ದಾನಿಗಳಾದ ಲತೀಕ ರಾಜೇಂದ್ರ ಅವರು ನೀಡಿದ ಕೊಡೆಗಳನ್ನು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ನಿರ್ದೇಶಕ ಬೀನಂಡ ಪೂಣಚ್ಚ ಅವರು ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇಂದAಡ ಪೊನ್ನಪ್ಪ, ಕಾರ್ಯನಿರ್ವಾಹಕರಾದ ಕರ್ನಂಡ ಬೊಳ್ಳಮ್ಮ, ಆಡಳಿತಾ ಧಿಕಾರಿ ಲಕ್ಷಿö್ಮÃನಾರಾಯಣ, ನಿರ್ದೇಶಕರಾದ ಮೂಕೊಂಡ ಶಶಿ ಸುಬ್ರಮಣಿ, ಸಾಬು ನಂಜಪ್ಪ, ಶಾಲೆಯ ಮುಖ್ಯ ಶಿಕ್ಷಕರಾದ ಹೆಚ್.ಡಿ. ಲೋಕೇಶ್ ಹಾಗೂ ಶಾಲಾ ಅಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಈ ಸಂದರ್ಭ ಸುಮಾರು ೧೫ ವರ್ಷ ನಿರಂತರ ಮುಖ್ಯ ಅಡುಗೆಯ ವರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಪಡೆದ ಶಾರದಮ್ಮ ಅವರಿಗೆ ಆಡಳಿತ ಮಂಡಳಿ ವತಿಯಿಂದ ಕಿರುಕಾಣೆಕೆ ನೀಡಿ ಸನ್ಮಾನ ಮಾಡಲಾಯಿತು. ನಂತರ ಶಾರದಾದೇವಿ ಪೂಜೆ ಹಾಗೂ ಭಜನೆ ನಂತರ ಎಲ್ಲರಿಗೂ ಸಿಹಿ ಪ್ರಸಾದ ವಿತರಣೆ ಮಾಡಲಾಯಿತು.