ಪೊನ್ನಂಪೇಟೆ, ಡಿ. ೩: ತಿತಿಮತಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕಳೆದ ತಿಂಗಳಾAತ್ಯದಲ್ಲಿ ನಿವೃತ್ತಿಯಾದ ನೆಲ್ಲಿರ ಕಮಲಾ ಉತ್ತಪ್ಪ ಅವರಿಗೆ ಶಾಲಾ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ತಿತಿಮತಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಂಗಳ, ೩೪ ವರ್ಷಗಳ ಕಾಲ ವಿವಿಧ ಶಾಲೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಕಮಲ ಉತ್ತಪ್ಪ ಅವರು ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದವರಾಗಿದ್ದಾರೆ. ಶಿಕ್ಷಕರು ಸೇವೆಯಿಂದ ನಿವೃತ್ತರಾದರೂ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಶಾಶ್ವತವಾದ ಸ್ಥಾನ ಪಡೆದು ಕೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಾರ, ಶಾಲೆಯ ಶಿಕ್ಷಕರಾದ ಯಮುನಾ, ಸಿ.ಎಂ., ರಾಘವೇಂದ್ರ, ನವೀನ್ ಬಾಶಿತ್, ಸೋಜಿತ, ಪ್ರಸಾದ್, ಶರತ್ ಕುಮಾರ್, ಕರಿಯಪ್ಪ, ನಿವೃತ್ತ ಶಿಕ್ಷಕ ನೆಲ್ಲಿರ ಉತ್ತಪ್ಪ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು.