ಮಡಿಕೇರಿ, ಡಿ. ೩: ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿಸೆಂಬರ್ ೭ ರಂದು ಬೆಳಿಗ್ಗೆ ೧೦ ಗಂಟೆಗೆ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೂಡಿಗೆ ಸೈನಿಕ ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್‌ಜೀತ್‌ಸಿಂಗ್ ಅವರು ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ.

ಜಿಲ್ಲೆಯ ಮಾಜಿ ಯೋಧರು ಅವರ ಕುಟುಂಬದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯ ಅವರು ಕೋರಿದ್ದಾರೆ.