ಕುಶಾಲನಗರ, ಡಿ. ೨: ನಾಡಿನ ಭಾಷೆ, ಆಚಾರ ವಿಚಾರ ಸಂಸ್ಕೃತಿಯ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ ಎಂದು ಕರ್ನಾಟಕ ಕಾವಲು ಪಡೆಯ ರಾಜ್ಯಾಧ್ಯಕ್ಷ ಎಂ. ಮೋಹನ್ ಕುಮಾರ್ ಗೌಡ ಹೇಳಿದರು.

ಕುಶಾಲನಗರ ಸರ್ಕಾರಿ ಇಂಜಿನಿ ಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ಕಾವಲು ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಆಯೋಜಿಸ ಲಾಗಿದ್ದ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಸಂಸ್ಕೃತಿ ಆಚಾರ ವಿಚಾರ ಗಳೊಂದಿಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರು ಪ್ರೀತಿಸಿ ಗೌರವಿಸಬೇಕು ಎಂದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾನಿಲಯದ ಉಪನ್ಯಾಸಕ ಜಮೀರ್ ಅಹಮದ್ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಪಡೆಯುವಾಗ ಕನ್ನಡಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಆಂಗ್ಲ ಭಾಷೆ ಅತಿ ಹೆಚ್ಚು ಬಳಕೆಯಾಗುತ್ತಿ ರುವುದು ದುರಾದೃಷ್ಟಕರ ಎಂದರು. ಕರ್ನಾಟಕ ಕಾವಲು ಪಡೆಯ ಕೊಡಗು ಜಿಲ್ಲಾಧ್ಯಕ್ಷ ಎಂ. ಕೃಷ್ಣ ಪ್ರಾಸ್ತಾವಿಕ ನುಡಿಯಾಡಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಂತರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಮಂದಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್. ಸತೀಶ್. ಅಬಕಾರಿ ನಿರೀಕ್ಷಕ ಲೋಕೇಶ್. ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ. ಕಸಾಪ ಮಾಜಿ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಕಸಾಪ ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ನಾಗೇಶ್. ಬಾರವಿ ಕನ್ನಡ ಅಭಿಮಾನಿ ಸಂಘದ ಬಬೀಂದ್ರ ಪ್ರಸಾದ್. ಶಿಕ್ಷಕರಾದ ಮಾಲಾದೇವಿ. ಕರ್ನಾಟಕ ಕಾವಲು ಪಡೆಯ ಪದಾಧಿಕಾರಿಗಳಾದ ವಿಜಯ ಕುಮಾರ್, ಮಂಜುನಾಥ್, ಇಂದಿರಾ, ಅಭಿಲಾಷ್ ಮತ್ತಿತರರು ಇದ್ದರು.