ಮಡಿಕೇರಿ, ಡಿ. ೩: ಮೂರು ರಾಜ್ಯಗಳಲ್ಲಿ ಬಿಜೆಪಿ ಪರ ಬಂದ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ವಿಶ್ಲೇಷಿಸಿದರು. ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯ ಗಳಲ್ಲಿ ಬಿಜೆಪಿ ಬಹುಮತ ಸಾಧಿಸಿದ ಹಿನ್ನೆಲೆ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ವಿಜಯೋತ್ಸವ ನಡೆಯಿತು. ನಗರದ ಸ್ಕಾ÷್ವ. ಲೀ. ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಹಾಕಿ, ಸಿಹಿಹಂಚಿ ವಿಜಯೋತ್ಸವ ಆಚರಿಸಿದರು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ ಈ ಸಂದರ್ಭ ಮಡಿಕೇರಿ, ಡಿ. ೩: ಮೂರು ರಾಜ್ಯಗಳಲ್ಲಿ ಬಿಜೆಪಿ ಪರ ಬಂದ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ವಿಶ್ಲೇಷಿಸಿದರು. ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯ ಗಳಲ್ಲಿ ಬಿಜೆಪಿ ಬಹುಮತ ಸಾಧಿಸಿದ ಹಿನ್ನೆಲೆ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ವಿಜಯೋತ್ಸವ ನಡೆಯಿತು. ನಗರದ ಸ್ಕಾ÷್ವ. ಲೀ. ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಹಾಕಿ, ಸಿಹಿಹಂಚಿ ವಿಜಯೋತ್ಸವ ಆಚರಿಸಿದರು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ ಈ ಸಂದರ್ಭ ಬಳಸಿದ್ದಾರೆ. ಕೆಸಿಆರ್ ಜನವಿರೋಧಿ ನೀತಿ ಹಿನ್ನೆಲೆ ಅವರಿಗೆ ಸೋಲಾಗಿದೆ. ಲೋಕಸಭೆಯಲ್ಲಿ ಕರ್ನಾಟಕದಲ್ಲಿ ಪೂರ್ಣ ಬಹುಮತ ಬಿಜೆಪಿ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಅರುಣ್ ಕುಮಾರ್, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್, ನಗರಸಭಾ ಸದಸ್ಯರುಗಳಾದ ಕೆ.ಎಸ್. ರಮೇಶ್, ಅರುಣ್ ಶೆಟ್ಟಿ, ಸಬಿತಾ, ಮಂಜುಳಾ ಬಿಜೆಪಿ ನಗರಾಧ್ಯಕ್ಷ ಮನು ಮಂಜುನಾಥ್ ಸೇರಿದಂತೆ ಇನ್ನಿ ತರರು ಹಾಜರಿದ್ದರು.

ಕುಶಾಲನಗರ: ಉತ್ತರ ಭಾರತದ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಬಿಜೆಪಿ ಪಕ್ಷದ ಗೆಲುವಿನ ಹಿನ್ನೆಲೆಯಲ್ಲಿ ಕುಶಾಲನಗರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕುಶಾಲನಗರ ಗಣಪತಿ ದೇವಾ ಲಯ ಮುಂಭಾಗ ಸೇರಿದ ಕಾರ್ಯ ಕರ್ತರು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ ನೇತೃತ್ವದಲ್ಲಿ ಪಕ್ಷದಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭ ಪುರಸಭೆ ಸದಸ್ಯ ರಾದ ಅಮೃತರಾಜ್, ಜಗದೀಶ್, ಡಿ ಕೆ ತಿಮ್ಮಪ್ಪ, ಪ್ರಮುಖರಾದ ಎಂ ಎನ್ ಕುಮಾರಪ್ಪ, ಜಿ.ಎಲ್. ನಾಗರಾಜ್, ಗಣಿ ಪ್ರಸಾದ್, ಗೌತಮ್, ಚಂದ್ರಶೇಖರ್ ಹೇರೂರು, ವೈಶಾಖ್, ಪ್ರವೀಣ್, ಎಂ.ವಿ. ನಾರಾಯಣ ಮತ್ತಿತರರಿದ್ದರು.