ಮುಳ್ಳೂರು, ಡಿ. ೪: ಶನಿವಾರಸಂತೆ ಶ್ರೀ ಬೀರಲಿಂಗೇಶ್ವರ, ಪ್ರಬಲಭೈರವಿ ಹಾಗೂ ಪರಿವಾರ ದೇವರು ಸೇವಾ ಸಮಿತಿಯ ೫ನೇ ವರ್ಷದ ವಾರ್ಷಿಕೋತ್ಸವ ಮತ್ತು ಪರಿವಾರ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.

ಕಳೆದ ೫ ವರ್ಷಗಳಿಂದ ಶ್ರೀ ಬೀರಲಿಂಗೇಶ್ವರ ಪ್ರಬಲಭೈರವಿ ಪರಿವಾರ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು, ಪಟ್ಟಣದಲ್ಲಿರುವ ವಿವಿಧ ದೇವಸ್ಥಾನಗಳು ಸೇರಿದಂತೆ ಅಕ್ಕಪಕ್ಕದಲ್ಲಿರುವ ದೇವಸ್ಥಾನಗಳಲ್ಲಿ ಪರಿವಾರ ದೇವರ ಸೇವಾ ಸಮಿತಿಯಿಂದ ವಿಶೇ಼ಷ ಮಹಾಪೂಜೆಯನ್ನು ನೆರವೇರಿಸಲಾಗುತ್ತಿದೆ. ಇದೇ ಸಂದರ್ಭ ಮುಸ್ಲಿಂ ಸಮುದಾಯದ ಮಸೀದಿಯಲ್ಲಿಯೂ ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡಲಾಗುತ್ತಿದ್ದು ಹಿಂದೂ, ಮುಸ್ಲಿಂ ಧರ್ಮದವರು ಧರ್ಮ ಬೇಧವಿಲ್ಲದೆ ಒಟ್ಟಾಗಿ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

ವಾರ್ಷಿಕ ಪೂಜಾ ಮಹೋತ್ಸವ ಅಂಗವಾಗಿ ಸೋಮವಾರ ಬೆಳಿಗ್ಗೆ ೬ ಗಂಟೆಗೆ ಗಂಗೆ ಪೂಜೆ, ಗೋಪೂಜೆ, ಮಂಗಳಾರತಿ ನೆರವೇರಿಸಿದ ನಂತರ ಪಟ್ಟಣದ ಸಹಕಾರ ಬ್ಯಾಂಕ್ ಸಮೀಪದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದವರೆಗೆ ಮಹಿಳೆಯರು, ಬಾಲಕಿಯರು ವಾದ್ಯಗೋಷ್ಠಿ ಸಹಿತ ಕಳಸ, ಕುಂಭ ಮೆರವಣಿಗೆಯೊಂದಿಗೆ ಶ್ರೀ ಬೀರಲಿಂಗೇಶ್ವರ ಪ್ರಬಲಭೈರವಿ ದೇವಸ್ಥಾನವನ್ನು ಪ್ರವೇಶಿಸಿದರು. ನಂತರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯ ಪ್ರಾರಂಭಗೊAಡಿತು. ಬೆಳಿಗ್ಗೆ ೯ ಗಂಟೆಗೆ ಪಟ್ಟಣದ ಶ್ರೀ ಗಣಪತಿ ಪಾರ್ವತಿ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಮಹಾಸಂಕಲ್ಪ, ಮಹಾಮಂಗಳಾರತಿ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ನಂತರ ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಬೆಳಿಗ್ಗೆ ೯-೩೦ ಕ್ಕೆ ಊರುಒಡೆಯ ದೇವಸ್ಥಾನದಲ್ಲಿ ದೇವರಿಗೆ ಮಹಾಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದ ನಂತರ ಬೆಳಿಗ್ಗೆ ೧೦ ಗಂಟೆಗೆ ಬ್ರಹ್ಮದೇವರ ಗುಡಿಯಲ್ಲಿ ದೇವರಿಗೆ ಮಹಾಪೂಜೆ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ೧೦-೩೦ ಕ್ಕೆ ಬಿದರೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ದೇವರಿಗೆ ಮಹಾಪೂಜೆ ಮತ್ತು ಮಂಗಳಾರತಿ ನಂತರ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಬೆಳಿಗ್ಗೆ ೧೧ ಗಂಟೆಗೆ ಹೆಮ್ಮನೆ ಗ್ರಾಮದ ಮಾರಮ್ಮ ಗುಡಿ ಮತ್ತು ಶ್ರೀ ಬಸವೇಶ್ವರ ದೇವಸ್ಥಾನಗಳಲ್ಲಿ ದೇವರಿಗೆ ಮಹಾಪೂಜೆ ಮಹಾಮಂಗಳಾರತಿ ಬಳಿಕ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ೧೧-೩೦ ಕ್ಕೆ ತ್ಯಾಗರಾಜ ಕಾಲೋನಿಯ ಚೌಡೇಶ್ವರಿ ದೇವಸ್ಥಾನದಲ್ಲಿ ಚೌಡೇಶ್ವರಿ ದೇವಿಗೆ ಮಹಾಪೂಜೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ ೧೨ ಗಂಟೆಗೆ ತ್ಯಾಗರಾಜ ಕಾಲೋನಿಯಲ್ಲಿರುವ ಶ್ರೀ ವಿಜಯ ವಿನಾಯಕ ದೇವಸ್ಥಾನದಲ್ಲಿ ದೇವರಿಗೆ ಮಹಾಪೂಜೆ, ಮಹಾಮಂಗಳಾರತಿ ಭಕ್ತಾದಿಗಳಿಗೆ ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ ೧೨-೩೦ಕ್ಕೆ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿರುವ ಬನ್ನಿಮಂಟಪದಲ್ಲಿ ಮಹಾಪೂಜೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ ೧ ಗಂಟೆಗೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮ, ಶ್ರೀ ಸೀತಾಲಕ್ಷಿö್ಮ, ಲಕ್ಷö್ಮಣ, ಆಂಜನೇಯ ದೇವರುಗಳಿಗೆ ಮಹಾಪೂಜೆ ವಿಧಿ ವಿಧಾನ ನೆರವೇರಿಸಲಾಯಿತು. ಮಧ್ಯಾಹ್ನ ೧-೩೦ ಕ್ಕೆ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಜಾಮೀಯಾ ಮಸೀದಿಯಲ್ಲಿ ಎಲ್ಲಾ ಜಾತಿ ಧರ್ಮದವರು ಒಂದಾಗಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಮಧ್ಯಾಹ್ನ ೨ ಗಂಟೆಗೆ ಶ್ರೀ ಬೀರಲಿಂಗೇಶ್ವರ ಪ್ರಬಲ ಭೈರವಿ ದೇವಸ್ಥಾನದಲ್ಲಿ ದೇವರಿಗೆ ಮಹಾಪೂಜೆ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.

ವಾರ್ಷಿಕ ಪೂಜಾ ಮಹೋತ್ಸವ ಅಂಗವಾಗಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮುಂಜಾನೆ ೫ ಗಂಟೆಯಿAದ ದೀಪಾರಾಧನೆ, ಗಣಪತಿ ಪೂಜೆ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ನವಗ್ರಹ ಹಾಗೂ ಮೃತ್ಯುಂಜಯ ಪೂಜೆ, ನವಗ್ರಹ, ಮೃತ್ಯುಂಜಯ ಹೋಮ, ಗಣಪತಿ ಹೋಮ, ಧನ್ವಂತರಿ ಹೋಮ, ಮೂಲ ದೇವರಿಗೆ ಫಲ-ಪಂಚಾಮೃತ ಅಭಿಷೇಕ, ಋಕವಾರು ರುದ್ರಾಭಿಷೇಕ, ಮಹಾಬಲಿ, ಮಹಾಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರೋಕ್ಷಣೆ ಮುಂತಾದ ಪೂಜಾ ವಿಧಿ ವಿಧಾನವನ್ನು ಅರ್ಚಕರು ನೆರವೇರಿಸಿದರು. ಮಧ್ಯಾಹ್ನ ಭಕ್ತಾದಿಗಳಿಗೆ ದೇವಾಲಯ ಸಮಿತಿಯಿಂದ ಅನ್ನಸಂತರ್ಪಣೆ ನಡೆಯಿತು.