ವೀರಾಜಪೇಟೆ, ಡಿ. ೪: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡನೀಯ ಎಂದು ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಕೊಕ್ಕಂಡ ಅಪ್ಪಣ್ಣ ಹೇಳಿದರು.
ಹಲ್ಲೆಯನ್ನು ಖಂಡಿಸಿ ವೀರಾಜಪೇಟೆ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಚಿಕ್ಕಮಗಳೂರಿನ ವಕೀಲ ಪ್ರೀತಂ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ರಾಕೇಶ್ ಹಾಗೂ ಸಂಘದ ಪದಾಧಿಕಾರಿಗಳು, ಹಿರಿಯ ವಕೀಲರುಗಳು ಭಾಗವಹಿಸಿದ್ದರು.