ಕೂಡಿಗೆ, ಡಿ. ೪: ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಯಲ್ಲಿ ಕಾವೇರಿ ನದಿ ಪಾತ್ರದ ಕೂಡುಮಂಗಳೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗಾಗಿ ಕಸ ವಿಲೇವಾರಿ ಘಟಕ ಆರಂಭಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು. ಗ್ರಾಮ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆಗೊಂಡAತೆ ಅಭಿವೃದ್ಧಿ ಕ್ರಿಯಾ ಯೋಜನೆಯನ್ನು ತಯಾರಿಸುವ ಸಲುವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಗೂ ಸಿಬ್ಬಂದಿಗಳೊAದಿಗೆ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಪೆಮ್ಮಯ್ಯ ಮತ್ತು ಹರ್ಷಿತ ಅವರು ಬಸನತ್ತೂರು ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘ ಸಮೀಪ, ಕೂಡುಮಂಗಳೂರು ಬಸವೇಶ್ವರ ದೇವಸ್ಥಾನ ಹತ್ತಿರ, ಕೂಡ್ಲೂರು ಕೈಗಾರಿಕಾ ಪ್ರದೇಶ ಸಿ.ಪಿ. ಕಾಫಿ ವರ್ಕ್ಸ್ ಪಕ್ಕದಲ್ಲಿ ಹಾಗೂ ಕೂಡ್ಲೂರು ಹೊಳೆ ಮಲ್ಲಪ್ಪ ದೇವಸ್ಥಾನ ಮುಂಭಾಗ ಜಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.