ಮಡಿಕೇರಿ, ಡಿ.೪: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಸಹಯೋಗದೊಂದಿಗೆ ಜೀವ ಸಂಕುಲಗಳ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆ ಅವುಗಳ ಪ್ರಸ್ತುತತೆ ಮತ್ತು ಭವಿಷ್ಯದ ನಿರೀಕ್ಷೆಗಳ ಕುರಿತಾದ ಎರಡು ದಿನಗಳ ಕಾಲ ಅಂರ‍್ರಾಷ್ಟಿçÃಯ ಸಮ್ಮೇಳನ ಏರ್ಪಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಅರಣ್ಯ ಮಹಾ ವಿದ್ಯಾಲಯದ ಡೀನ್ ಡಾ.ಜಿ.ಎಂ. ದೇವಗಿರಿ ಮಾತನಾಡಿ; ತಾ. ೭ ಮತ್ತು ೮ರಂದು ಪೊನ್ನಂಪೇಟೆಯಲ್ಲಿ ಸಮ್ಮೇಳನ ನಡೆಯಲಿದ್ದು,

(ಮೊದಲ ಪುಟದಿಂದ) ದೇಶ ವಿದೇಶಗಳ ಸುಮಾರು ೧೫೦ ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಸಂಶೋಧನೆ ನಡೆಸುತ್ತಿರುವ ಭಾರತದ ವಿಜ್ಞಾನಿಗಳಲ್ಲದೆ ಸ್ವಿಟ್ಜರ್‌ಲ್ಯಾಂಡ್, ಯುಕೆ, ಜರ್ಮನಿ, ಫಿಲಿಫೈನ್ಸ್, ಇಟಲಿ ದೇಶಗಳಿಂದ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಜೀವ ವೈವಿಧ್ಯತೆಯ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆ, ಮಾನವ ವನ್ಯ ಪ್ರಾಣಿ ಸಂಘರ್ಷ ಸೇರಿದಂತೆ ಇತರ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಕೃಷಿ ಮತ್ತು ತೋಟಗಾರಿಕಾ ವಿವಿಯ ಕುಲಪತಿ ಡಾ.ಆರ್.ಸಿ.ಜಗದೀಶ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪರಿಸರ ಮತ್ತು ಪರಿಸರ ವಿಜ್ಞಾನಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಕರು ಹಾಗೂ ಜೀವ ವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಜಗತ್ ರಾಮ್, ಕರ್ನಾಟಕ ಜಲಾನಯನ ಅಭಿವೃದ್ಧಿ ಮಂಡಳಿ ಆಯುಕ್ತ ಹೆಚ್.ಸಿ.ಗಿರೀಶ್, ಶಿಕ್ಷಣ ನಿರ್ದೇಶಕ ಡಾ.ಹೇಮ್ಲಾ ನಾಯಕ್, ಕುಲ ಸಚಿವ ಡಾ.ಕೆ.ಸಿ. ಶಶಿಧರ್, ಡೀನ್ ಡಾ.ಎಂ.ದಿನೇಶ್ ಕುಮಾರ್, ಕೊಡಗು ವಿವಿ ಕುಲಪತಿ ಡಾ. ಅಶೋಕ್ ಎಸ್. ಆಲೂರು ಅವರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇಂದು ಮಣ್ಣು ದಿನಾಚರಣೆ

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಅರಣ್ಯ ಮಹಾ ವಿದ್ಯಾಲಯ, ಮತ್ತು ವಿಸ್ತರಣಾ ಶಿಕ್ಷಣ ಘಟಕ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆ ಇವುಗಳ ಆಶ್ರಯದಲ್ಲಿ ಅರಣ್ಯ ಮಹಾ ವಿದ್ಯಾಲಯದ ಆವರಣದಲ್ಲಿ ತಾ.೫ರಂದು (ಇಂದು) ಭತ್ತದ ಬೆಳೆ ಕ್ಷೇತ್ರೋತ್ಸವ ಹಾಗೂ ವಿಶ್ವ ಮಣ್ಣು ದಿನ ಆಚರಣೆ ಮಾಡಲಾಗುತ್ತಿದೆ ಎಂದು ದೇವಗಿರಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರಸ್ತುತ ಕೊಡಗಿನ ಕೃಷಿಯಲ್ಲಿನ ಅವಕಾಶಗಳು ವೈಜ್ಞಾನಿಕ ಕೃಷಿ ಪದ್ಧತಿಗಳು, ಸಮಗ್ರ ಕೃಷಿ ಪಾಲನೆ ಇತ್ಯಾದಿಗಳ ಬಗ್ಗೆ ವಿಚಾರ ವಿನಿಮಯ, ವಸ್ತು ಪ್ರದರ್ಶನ, ಚರ್ಚೆಗಳು ನಡೆಯಲಿವೆ. ಅಲ್ಲದೆ, ಕೃಷಿ ಆದಾಯ ಹೆಚ್ಚಿಸಿಕೊಳ್ಳಲು ಕೈಗೊಳ್ಳಬಹುದಾದ ಕೃಷಿ ಸಂಬAಧಿತ ಚಟುವಟಿಕೆಗಳು ಹಾಗೂ ಉಪ ಕಸುಬುಗಳ ಬಗ್ಗೆ ಮಾಹಿತಿ ನೀಡಲಾಗುವದು. ವಿಚಾರ ಗೋಷ್ಠಿಯಲ್ಲಿ ಆಯಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಮಾದರಿಯಾಗಿರುವ ಪ್ರಗತಿಪರ ರೈತರಿಂದ ಮಾಹಿತಿ ಕೊಡಿಸುವದಲ್ಲದೆ, ಆಯಾ ಕ್ಷೇತ್ರದ ಪರಿಣಿತ ವಿಜ್ಞಾನಿಗಳಿಂದ ವಿಷಯ ಮಂಡನೆ ಹಾಗೂ ಸಂವಾದ ಆಯೋಜಿಸಲಾಗಿದೆ. ಗೋಷ್ಠಿಯ ಉದ್ಘಾಟನೆಯನ್ನು ತೊಟಗಾರಿಕೆ ವಿವಿಯ ವಿಸ್ತರಣಾ ನಿರ್ದೇಶಕ ಡಾ.ಕೆ.ಟಿ.ಗುರುಮೂರ್ತಿ ಉದ್ಘಾಟಿಸುವರು. ಸಂಶೋಧನಾ ನಿರ್ದೇಶಕ ಡಾ.ದುಷ್ಯಂತ್‌ಕುಮಾರ್, ಕೃಷಿ ಇಲಾಖಾ ಜಂಟಿ ನಿರ್ದೇಶಕ ಡಾ.ಕೆ.ಎಂ. ಸೋಮಸುಂದರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಲೀಲಾವತಿ ಉಪಸ್ಥಿತರಿರುವರು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಂಟಿ ಕಾರ್ಯದರ್ಶಿ ಗಿರೀಶ್, ಕೆಂಚಾರೆಡ್ಡಿ ಇದ್ದರು.