ಮಡಿಕೇರಿ, ಡಿ. ೫: ದೂರಶಿಕ್ಷಣ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’ ಪ್ರವೇಶಕ್ಕೆ (೬ ತಿಂಗಳ ಅವಧಿ ಕೋರ್ಸ್ಗೆ) ಅರ್ಜಿ ಆಹ್ವಾನಿಸಲಾಗಿದೆ. (ಸಹಕಾರ ಸಂಘ/ ಸಂಸ್ಥೆ/ ಬ್ಯಾಂಕುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾತ್ರ).

ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆಸಿಎಸ್ ನಿಯಮ ೧೭(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕು.

ಕೊಡಗು, ಹಾಸನ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದು. ಸಂಪರ್ಕ ರಹಿತ ಕೋರ್ಸ್ ಪ್ರವೇಶಕ್ಕೆ ಅವಕಾಶ, ವೃತ್ತಿಕೌಶಲ್ಯ, ವೃತ್ತಿಪರತೆ, ಅಧ್ಯಯನ ಸಾಹಿತ್ಯ ನೀಡಲಾಗುವುದು, ೬ ತಿಂಗಳ ಅವಧಿಯಲ್ಲಿ ೧೦ ದಿನಗಳ ಸಂಪರ್ಕ ತರಗತಿಗಳು, ಈಗಾಗಲೇ ರಾಜ್ಯದಲ್ಲಿ ಸುಮಾರು ೩೦ ಸಾವಿರ ಉದ್ಯೋಗಿಗಳು ತರಬೇತಿ ಪಡೆದಿದ್ದಾರೆ.

ಅರ್ಜಿಯನ್ನು ತರಬೇತಿ ಸಂಸ್ಥೆಗಳಲ್ಲಿ ಅಥವಾ ಆನ್‌ಲೈನ್ ಮೂಲಕ ಸಹ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಪ್ರವೇಶಾತಿ Websiಣe: ತಿತಿತಿ.ಞsಛಿಜಿಜಛಿm.ಛಿo.iಟಿ ಹೆಚ್ಚಿನ ಮಾಹಿತಿಗೆ ದೂ.ಸಂ. ೮೭೯೨೬೨೮೪೩೭, ೯೮೪೫೩೧೮೩೬೪, ೯೬೬೩೧೫೩೯೨೨, ೭೨೫೯೭೨೯೧೦೪, ೮೭೬೨೧೧೦೯೫೨, ೮೭೬೨೯೨೫೮೬೨ ನ್ನು ಸಂಪರ್ಕಿಸ ಬಹುದು ಎಂದು ಕರ್ನಾಟಕ ಇನ್‌ಸ್ಟಿ ಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಯ ಪ್ರಾಂಶುಪಾಲೆÀ ಡಾ. ಆರ್.ಎಸ್. ರೇಣುಕಾ ಅವರು ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ

ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹಾಗೆಯೇ ೨೦೨೩-೨೪ ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ೫೦ ಸಾವಿರ ಸಾಲವೂ ಸೇರಿರುತ್ತದೆ.)

ಭೂ ಒಡೆತನ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಏಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾ ಗುವುದು. ಘಟಕ ವೆಚ್ಚ ರೂ. ೨೫ ಲಕ್ಷ/ ೨೦ ಲಕ್ಷ ಸಹಾಯಧನ ಶೇ.೫೦. ಸಾಲ ಶೇ. ೫೦ (ಶೇ. ೬ ರಷ್ಟು ಬಡ್ಡಿದರ).

ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ hಣಣಠಿs://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್‌ಸೈಟ್ ವಿಳಾಸ: hಣಣಠಿs://sevಚಿsiಟಿಜhuseಡಿviಛಿes. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ತಾ. ೧೫ ರವರೆಗೆ ಅವಧಿ ವಿಸ್ತರಿಸ ಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಾಗೆಯೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಯೋಜನೆಗೆ hಣಣಠಿs://ಞmvsಣಜಛಿಟ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್‌ಸೈಟ್ ವಿಳಾಸ hಣಣಠಿs://sevಚಿsiಟಿಜhu seಡಿviಛಿes. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಡಿಸೆಂಬರ್, ೧೫ ರವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-೫೭೧೨೦೧ ದೂ. ೦೮೨೭೨-೨೨೮೮೫೭ ನ್ನು ಸಂಪರ್ಕಿಸ ಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.