ಮಡಿಕೇರಿ, ಡಿ.೬: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಕೆಲವು ಇಲಾಖೆಗಳು ಭೌತಿಕ ಪ್ರಗತಿ ಸಾಧಿಸಿದ್ದು, ಆರ್ಥಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ಸೂಚಿಸಿದರು. ವೈಯಕ್ತಿಕ ಫಲಾನುಭವಿಗಳು ಆಯ್ಕೆ ಮಾಡದಿದ್ದಲ್ಲಿ, ಕೂಡಲೇ ಆಯ್ಕೆ ಮಾಡಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದರು.
ಬಡವರಿಗಾಗಿ ಮೀಸಲಿಡುವ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಆಶಯಗಳನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಇಲಾಖೆ ಕಾರ್ಯಕ್ರಮಗಳು ನಿಗದಿಯಂತೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಎನ್. ಮಂಜು ನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚAದ್ರಕಾAತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ ಇತರರು ಇದ್ದರು.