ಕುಶಾಲನಗರ, ಡಿ. ೫: ಕುಶಾಲನಗರ ಸಮೀಪ ಗುಡ್ಡೆಹೊಸೂರು ಗ್ರಾಮ ವ್ಯಾಪ್ತಿಯ ಬಾಳುಗೋಡು ಬಳಿ ಮನೆಗೆ ನುಗ್ಗಿ ಕಳವು ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಹೊರ ರಾಜ್ಯದ ಅಪರಾಧ ಹಿನ್ನೆಲೆಯುಳ್ಳ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಳುಗೋಡು ಗ್ರಾಮ ನಿವಾಸಿ ಶರೀಫ್ ಎಂಬವರ ಮನೆಗೆ ನುಗ್ಗಿ ಕಳವು ಮಾಡಿದ ಹಿನ್ನೆಲೆಯಲ್ಲಿ ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (೩೩) ಎಂಬಾತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿ ಮನೆಯ ಹಿಂಭಾಗದಿAದ ಪ್ರವೇಶಿಸಿ ಗಾಡ್ರೇಜ್ನಲ್ಲಿದ್ದ
ರೂ ೫,೦೦೦ ನಗದು ೪೭ ಗ್ರಾಂ ಚಿನ್ನಾಭರಣ ೨೦೦ ಗ್ರಾಂ ಬೆಳ್ಳಿ ಆಭರಣಗಳನ್ನು ಕಳುವು ಮಾಡಿರುವ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಕುಶಾಲನಗರ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಕೆ. ರಾಜೇಶ್, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮೋಹನ್ ರಾಜು ನೇತೃತ್ವದಲ್ಲಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿತ್ತು.
ಕೃತ್ಯಕ್ಕೆ ಸಂಬAಧಿಸಿದ ಮಾಹಿತಿ ಮತ್ತು ಸಾಕ್ಷಾö್ಯಧಾರಗಳನ್ನು ಕಲೆಹಾಕಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ವಿಶೇಷ ತಂಡ ಆರೋಪಿಯಿಂದ ರೂ.೧೦೦೦ ನಗದು ೪೭ ಗ್ರಾಂ ಚಿನ್ನಾಭರಣ ಮತ್ತು ೨೦೦ ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆರೋಪಿ ಸೈಫುಲ್ ಇಸ್ಲಾಂ ಅಸ್ಸಾಂ ರಾಜ್ಯದ ಬುರಗಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ಮತ್ತು
(ಮೊದಲ ಪುಟದಿಂದ) ಕಳವು ಹಾಗೂ ನಿಷೇಧಿತ ಮಾದಕ ವಸ್ತುಗಳ ಸರಬರಾಜು ಮಾರಾಟ ಪ್ರಕರಣಗಳಲ್ಲಿ ಕೂಡ ಭಾಗಿಯಾಗಿ ತಲೆಮರೆಸಿಕೊಂಡಿರುವುದಾಗಿ ಕುಶಾಲನಗರ ಡಿವೈಎಸ್ಪಿ ಆರ್ ವಿ ಗಂಗಾಧರಪ್ಪ ತಿಳಿಸಿದ್ದಾರೆ. ಆರೋಪಿ ಸಮೀಪದ ರಂಗಸಮುದ್ರ ಗ್ರಾಮದಲ್ಲಿ ವಾಸವಿದ್ದು ಕೂಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣೆಯ ಪಿಎಸ್ಐ ಕೆ.ಎಚ್. ಭಾರತಿ ಕುಶಾಲನಗರ ಗ್ರಾಮಾಂತರ ಠಾಣೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪ್ರಕರಣದಲ್ಲಿ ಆರೋಪಿಯನ್ನು ಪತ್ತೆಹಚ್ಚಲು ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೊರ ರಾಜ್ಯ ಅಥವಾ ಹೊರ ಜಿಲ್ಲೆಗಳಿಂದ ಕೂಲಿ ಕೆಲಸಕ್ಕಾಗಿ ಬರುವ ಜನರ ಕುರಿತು ಅಪರಾಧಿತÀ ಹಿನ್ನೆಲೆಯನ್ನು ಪರಿಶೀಲಿಸಿಕೊಳ್ಳುವುದು ಮತ್ತು ಕೂಲಿ ಕೆಲಸಕ್ಕೆ ಸೇರಿಸಿಕೊಂಡಿರುವ ಜನರ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳು ಇದೇ ಸಂದರ್ಭ ಕೋರಿಕೊಂಡಿದ್ದಾರೆ.