ಚೆಯ್ಯಂಡಾಣೆ, ಡಿ. ೫: ನಾಡಿನಾದ್ಯಂತ ಲಕ್ಷಾಂತರ ಜನರ ಬದುಕಿಗೆ ಬೆಳಕನ್ನು ಚೆಲ್ಲಿದಂತಹ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಸ್ಥೆಯು ಮನುಷ್ಯನ ಸರ್ವಾಂಗೀಣ ಪ್ರಗತಿಗೆ ಬೇಕಾ ದಂತಹ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಮನುಷ್ಯನ ಜೀವನದ ಗುಣಮಟ್ಟವನ್ನು ಮೇಲೆ ತರಲು ಮಾಡಿರುವ ಸೇವೆ ಶ್ಲಾಘನೀಯ ಎಂದು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹಾಗೂ ನರಿಯಂದಡ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಚೆಯ್ಯಂಡಾಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮ ಎನ್ನುವುದು ಒಬ್ಬ ವ್ಯಕ್ತಿಯ ವೈಯಕ್ತಿಕ ಆಚರಣೆಯಾಗಿದೆ. ಒಬ್ಬ ಮನುಷ್ಯ ಉತ್ತಮ ಸಂಸ್ಕಾರವನ್ನು ಹೊಂದಿದ್ದರೆ ಅವನಿಗೆ ಉತ್ತಮ ಜೀವನ ನಡೆಸಲು ಸಾಧ್ಯ. ಯಾವುದೇ ಜಾತಿ ಧರ್ಮಕ್ಕೆ ಸೇರಿದವನಾಗಿದ್ದರೂ ಮನುಷ್ಯ ಕುಲಕ್ಕೆ ಒಳ್ಳೆಯದನ್ನು ಬಯಸಬೇಕು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ನ ಯೋಜನಾಧಿಕಾರಿ ಪುರುಷೋತ್ತಮ ಅವರು ಮಾತನಾಡಿ, ವೀರೇಂದ್ರ ಹೆಗಡೆಯವರ ಕನಸಿನಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಯಾವುದೇ ಜಾತಿ, ಮತ, ಧರ್ಮ ಬೇದವಿಲ್ಲದೆ ನಾವೆಲ್ಲರೂ ಒಂದೇ ಎಂಬುವುದಾಗಿದೆ. ಪ್ರತಿ ಮನೆಯಲ್ಲೂ ಬೆಳಕು ಕಾಣಬೇಕು. ಬಡತನ ಎಂಬ ಬೇಗೆಯಿಂದ ಪ್ರತಿ ಕುಟುಂಬ ಹೊರ ಬರಬೇಕು ಎಂಬ ಕಲ್ಪನೆಯಿಂದ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯನ್ನು ಮಾಡಿದ್ದಾರೆ ಎಂದರು.
ನಿವೃತ್ತ ಶಿಕ್ಷಕಿ ರೇಖಾ ಉಲ್ಲಾಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು. ಗಣಪತಿ ಹೋಮ ಹಾಗೂ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆಯ ನೇತೃತ್ವವನ್ನು ಅರ್ಚಕ ಶಿವ ಶರ್ಮ ವಹಿಸಿದ್ದರು. ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನರಿಯಂದಡ ಬಿ.ಸಿ. ಟ್ರಸ್ಟ್ ಒಕ್ಕೂಟದ ಅಧ್ಯಕ್ಷೆ ಮುಂಡಿಯೋಳAಡ ಮಾಚಮ್ಮ, ನಾಪೋಕ್ಲು ಶೌರ್ಯ ತಂಡದ ಸದಸ್ಯರು, ಸ್ಥಳೀಯ ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು, ಮತ್ತಿತರರು ಪಾಲ್ಗೊಂಡಿದ್ದರು.