ವೀರಾಜಪೇಟೆ, ಡಿ. ೬: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗುವಂತಹ ಹೆಚ್ಚು ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ನಲ್ಲಿಯೇ ಇತ್ಯರ್ಥಪಡಿಸುವಂತಾಗಬೇಕು ಎಂದು ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್. ಸುಜಾತ ಹೇಳಿದರು.
ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ವಕೀಲರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ತಾ.೯ ರಂದು ೧೦-೩೦ ಗಂಟೆಗೆ ನಡೆಯಲಿರುವ ಮೆಗಾ ಲೋಕ ಅದಾಲತ್ನಲ್ಲಿ ರಾಜಿ ಆಗುವಂತ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ವಕೀಲರುಗಳು ಸಹಕಾರ ನೀಡುವಂತಾಗಬೇಕು ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಕೊಠಾರಿ ಅವರು ಮಾತನಾಡಿ ರಾಜಿ ಆಗುವಂತ ವ್ಯಾಜ್ಯ ಪೂರ್ವ ಪ್ರಕರಣಗಳ ಬಗ್ಗೆ ಎರಡು ಕಡೆಯವರನ್ನು ಕರೆಸಿ ಇತ್ಯರ್ಥಪಡಿಸಬೇಕು. ನ್ಯಾಯಾಧೀಶರ ಕೆಲಸಗಳನ್ನು ಸರಿಯಾಗಿ ನಾವು ಮಾಡುತ್ತೇವೆ. ಸಂಶಯಬೇಡ, ಪ್ರಕರಣಕ್ಕೆ ಸಂಬAಧಿಸಿದAತೆ ವಕೀಲರುಗಳ ಸಹಕಾರ ಅಗತ್ಯವಾಗಿದೆ ಎಂದರು.
ವೇದಿಕೆಯಲ್ಲಿದ್ದ ಅಪರ ಸಿವಿಲ್ ನ್ಯಾಯಾಧೀಶರಾದ ಪ್ರದೀಪ್ ಪೋತದಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ಅಪ್ಪಣ್ಣ ಮಾತನಾಡಿ ತಾ.೯ ರಂದು ನಡೆಯುವ ಮೆಗಾ ಲೋಕ ಅದಾಲತ್ನಲ್ಲಿ ಪ್ರಕರಣಗಳ ಇತ್ಯರ್ಥ ಪಡಿಸಲು ವಕೀಲರ ಸಂಘ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಸಭೆಯಲ್ಲಿ ಹಿರಿಯ ವಕೀಲರಾದ ಎನ್.ಜಿ. ಕಾಮತ್, ಕೆ.ಎನ್. ವಿಶ್ವನಾಥ್, ಎಂ.ಕೆ. ದಿನೇಶ್, ಡಿ.ಸಿ. ಧ್ರುವಕುಮಾರ್, ರಂಜಿತ್ ಕುಮಾರ್ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ವಿ.ಜಿ.ರಾಕೇಶ್ ಸ್ವಾಗತಿಸಿದರು.