ನಾಪೋಕ್ಲು, ಡಿ. ೫: ಎಸ್.ಎಂ.ಎಸ್ ವಿದ್ಯಾಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆದ ಸಿಬಿಎಸ್ಸಿ ಕ್ರೀಡಾಕೂಟದಲ್ಲಿ ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆ ಪ್ರಶಸ್ತಿ ಪಡೆದಿದೆ.
ಈ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಪ್ರಥಮ, ಬಾಲಕಿಯರ ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಯಾನ್ ಉತ್ತಮ ಆಟಗಾರ ಮತ್ತು ಹಕೀಮಾ ಉತ್ತಮ ಆಟಗಾರ್ತಿ ಪ್ರಶಸ್ತಿ ಪಡೆದರು. ಕ್ರೀಡಾಕೂಟದಲ್ಲಿ ಸಿಬಿಎಸ್ಸಿ ಶಾಲೆಗಳು ಪಾಲ್ಗೊಂಡಿದ್ದವು.