ಮಡಿಕೇರಿ, ಡಿ. ೫: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಾಗೂ ತಾ. ೧೩ ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ. ೦೮೨೭೨-೨೯೫೨೯೭ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.