ಕುಶಾಲನಗರ, ಡಿ.೬: ಕುಶಾಲನಗರದಲ್ಲಿ ನಡೆದ ನಕಲಿ ಐಟಿ ರೈಡ್ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಪ್ರದೀಪ್ ಎಂಬಾತನನ್ನು ಕುಶಾಲನಗರ ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಆದಾಯ ತೆರಿಗೆ ಅಧಿಕಾರಿಗಳೆಂದು ಹೇಳಿಕೊಂಡು ೫ ಮಂದಿಯ ತಂಡ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿ ಗ್ರಾಮದಲ್ಲಿ ವೈದ್ಯರೊಬ್ಬರ ಮನೆಗೆ ನುಗ್ಗಿ ಮನೆಯನ್ನು ತಲಾಶ್ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಕೊಡಗು ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ಐದು ಮಂದಿಯನ್ನು ಕುಶಾಲನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ಕ್ರಮ ಕೈಗೊಂಡಿದ್ದರು. ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಪ್ರದೀಪ್‌ನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ. -ಚಂದ್ರಮೋಹನ್