ಮಡಿಕೇರಿ, ಡಿ. ೫: ಮಡಿಕೇರಿಯ ಶ್ರೀ ಇಗ್ಗುತಪ್ಪ ಕೊಡವಕೇರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಕಾರ್ಯಕ್ರಮ ತಾ. ೮ ರಂದು ಸಂಜೆ ೬ ಗಂಟೆಗೆ ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷೆ ಮೊಣ್ಣಂಡ ಶೋಭಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಅತಿಥಿಗಳಾಗಿ ಸಂಘದ ಸದಸ್ಯ ಹಾಗೂ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಾತಂಡ ಸುರೇಶ್ ಚಂಗಪ್ಪ ಅವರು ಪಾಲ್ಗೊಳ್ಳಲಿದ್ದಾರೆ.