ಪೊನ್ನAಪೇಟೆ, ಡಿ. ೫: ಜಿಲ್ಲೆಯ ಮಂದಿ ಅದರಲ್ಲೂ ಕೊಡವ ಹಾಗೂ ಕೊಡವ ಭಾಷಿಕ ಜನಾಂಗ ಇಗ್ಗುತಪ್ಪ ದೇವರ ಪುತ್ತರಿ ದೇವಕಟ್ಟ್ ಅನ್ನು ತಪ್ಪದೆ ಪಾಲನೆ ಮಾಡುವಂತೆ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕರೆ ನೀಡಿದರು.
ಪೊನ್ನಂಪೇಟೆ ತಾಲೂಕಿನ ಕುಂದಾ ಸಮೀಪದ ಬೊಟ್ಟಿಯತ್ ಮೂಂದ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್'ಗೆ ಸೇರಿದ "ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್"ನ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಪ್ರತಿವರ್ಷ ಪುತ್ತರಿ ನಮ್ಮೆಗೆ ಹದಿನೈದು ದಿವಸ ಮುಂಚಿತವಾಗಿ ಅಮಾವಾಸ್ಯೆಯ ದಿನದಂದು ಇಗ್ಗುತಪ್ಪ ದೇವರ ಮೂಲಸ್ಥಾನವಾದ "ಮಲ್ಮ" ಬೆಟ್ಟದಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ತಕ್ಕಮುಖ್ಯಸ್ಥರು ಸೇರಿ ಪುತ್ತರಿ ಹಬ್ಬದ "ದೇವ ಕಟ್ಟ್" ಅನ್ನು ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ಒಂದಷ್ಟು ಕಟ್ಟುಪಾಡುಗಳನ್ನು ಕೂಡ ವಿಧಿಸಲಾಗುತ್ತದೆ ಹಾಗೂ ಅದನ್ನು ದೇವರ ಮುಂದೆ ಒಪ್ಪಿಸಲಾಗುತ್ತದೆ. ಆದರೆ ಇದನ್ನು ಜಿಲ್ಲೆಯ ಮಂದಿ ಇತ್ತೀಚೆಗೆ ಸರಿಯಾಗಿ ಪಾಲನೆ ಮಾಡುತ್ತಿಲ್ಲ, ಇದರಿಂದ ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ಬದುಕು ಕಟ್ಟಿಕೊಂಡಿರುವ ಕೊಡವ ಹಾಗೂ ಕೊಡವ ಭಾಷಿಕ ಸಮುದಾಯ ಅವರವರ ಸಂಸಾರದಲ್ಲಿ ಬಹಳಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಆದರೆ ಇದು ಕೆಲವರಿಗೆ ಅರ್ಥ ಆಗುತ್ತಿಲ್ಲ ಎಂದು ಅವರು ಹೇಳಿದರು.
ಪುತ್ತರಿ ನಮ್ಮೆಗೆ ಹದಿನೈದು ದಿನಗಳ ಹಿಂದೆ ಇಗ್ಗುತಪ್ಪ ದೇವರ ಪುತ್ತರಿ ದೇವ ಕಟ್ಟ್ ಸಂದರ್ಭ ಹೇಳಲಾದ ಪ್ರತಿಯೊಂದು ವಾಕ್ಯಗಳು ದೇವರ ವಾಕ್ಯಗಳಂತೆ, ನಮ್ಮ ಹಿರಿಯರು ನಡೆಸಿಕೊಂಡು ಬಂದಿರುವ ಆಚಾರ ವಿಚಾರಗಳನ್ನು ಇದೀಗ ಮುಂದುವರಿಸಿಕೊAಡು ಬರಲಾಗಿದೆ. ಇದನ್ನು ತಪ್ಪದೆ ಪಾಲನೆ ಮಾಡಬೇಕು. ಹಲವಾರು ಕಟ್ಟುಪಾಡುಗಳನ್ನು ವಿಧಿಸಿ ಕಟ್ಟು ಹಾಕಿ ದೇವರ ಸನ್ನಿಧಿಯಲ್ಲಿ ದೇವರಿಗೆ ಒಪ್ಪಿಸಲಾಗಿರುತ್ತದೆ. ಇದಕ್ಕೆ ಬಹಳಷ್ಟು ಶಕ್ತಿ ಇದ್ದು ಯಾರು ಪುತ್ತರಿ ದೇವಕಟ್ಟ್ ಉಲ್ಲಂಘನೆ ಮಾಡದೆ ಪರಿಪಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಮಂದ್ ಮಾನಿಗಳು ಶೃದ್ಧಾ ಭಕ್ತಿಯ ಧಾರ್ಮಿಕ ಕೇಂದ್ರವಿದ್ದAತೆ ಇದು ನಮಗೆ ದೇವಸ್ಥಾನವು ಹೌದು. ನಮ್ಮ ಶ್ರೀಮಂತ ಸಂಸ್ಕೃತಿಯ ಅನಾವರಣ ಮಾಡುವ ಸ್ಥಳವು ಹೌದು ಎಂದ ಅವರು. ಈ ಹಿಂದೆ ನಮ್ಮ ಪೂರ್ವಿಕರು ಎಲ್ಲಿಯೂ ಇತ್ಯರ್ಥ ಆಗದೆ ಉಳಿದಿರುವ ಬಹಳಷ್ಟು ವ್ಯಾಜ್ಯಗಳನ್ನು ಮಂದ್ ಮಾನಿಗಳಿಗೆ ತರುವ ಮೂಲಕ ಇಲ್ಲಿ ಇತ್ಯರ್ಥ ಮಾಡಿಕೊಳ್ಳುತ್ತಿದ್ದರು. ಕೋರ್ಟ್ ಕಛೇರಿಗೆ ವ್ಯಾಜ್ಯಗಳು ಹೋಗುತ್ತಿರಲಿಲ್ಲ. ಈ ಮಂದ್'ಗಳಿಗೆ ಅಷ್ಟೊಂದು ಹಿರಿಮೆ ಇದೆ. ಸಣ್ಣಪುಟ್ಟ ವಿಷಯಗಳಿಗೆ ಮಂದ್'ಗಳಲ್ಲಿ ವ್ಯಾಜ್ಯಗಳನ್ನು ನಡೆಸಬಾರದು. ಸಣ್ಣಪುಟ್ಟ ವಾಗ್ವಾದಗಳು ಮನಸ್ತಾಪಗಳು ಆಗುವುದು ಸಹಜ. ಇದನ್ನು ಜನಾಂಗ ಮುಂದುವರಿಸಿಕೊAಡು ಹೋಗಬಾ ರದು. ಮಂದ್'ಗಳಿಗೆ ಅಗಾಧವಾದ ಶಕ್ತಿ ಇದೆ, ಇದಕ್ಕೆ ಅಗೌರವ ತೋರಿಸಬಾರದು ಎಂದು ಹೇಳಿದರು. ಈ ಕೈಮುಡಿಕೆ ಪುತ್ತರಿ ಕೋಲ್ ಮಂದ್'ನಲ್ಲಿ ೧೦.೦೪.೧೯೬೯ ರಲ್ಲಿ ಅಂದಿನ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಉತ್ತಪ್ಪ ಹಾಗೂ ಕಾರ್ಯದರ್ಶಿ ಆಗಿದ್ದ ವಕೀಲ ಚಿಯಕ್ಪೂವಂಡ ಭೀಮಯ್ಯ ನೇತೃತ್ವದಲ್ಲಿ ನಡೆದ ದೇಶಸಭೆಯನ್ನು ನೆನಪಿಸಿಕೊಂಡರು.
ಪ್ರತಿವರ್ಷ ಮೂಂದ್ನಾಡ್ ವತಿಯಿಂದ ಸಾಧಕರೊಬ್ಬರಿಗೆ ಮಾಡಲಾಗುವ ಸನ್ಮಾನ ಸ್ವೀಕರಿಸಿದ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಮಾತನಾಡಿ ನಮಗೆ ಜಿಲ್ಲೆ, ಹೊರಜಿಲ್ಲೆ, ದೇಶ ವಿದೇಶಗಳಲ್ಲಿ ಸಿಗುವ ಸನ್ಮಾನಕ್ಕಿಂತ ನಮ್ಮ ನಾಡಿನಲ್ಲಿ ನಮ್ಮ ಊರಿನಲ್ಲಿ ಸಿಗುವ ಸನ್ಮಾನಗಳು ಬಹಳ ದೊಡ್ಡದು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಮೂರು ನಾಡಿನ ತಕ್ಕಮುಖ್ಯಸ್ಥರು ಹಾಗೂ ಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಮಾತನಾಡಿ ಕೈಮುಡಿಕೆ ಮಂದ್ ಎನ್ನುವುದು ಕೊಡಗಿನಲ್ಲಿ ಪ್ರಸಿದ್ಧಿ ಪಡೆದಿರುವ ಮಂದ್ ಆಗಿದ್ದು, ಸೇನಾ ಮಹಾದಂಡನಾಯಕನಾಗಿದ್ದ ಫೀಲ್ಡ್ ಮಾರ್ಷಲ್ ಕೊಡಂದೇರ ಕಾರ್ಯಪ್ಪ ಅವರು ಕೋಲು ಹೊಡೆದ ಖ್ಯಾತಿಯನ್ನು ಹೊಂದಿದೆ ಎಂದರು. ಮುಂದಿನ ಪೀಳಿಗೆಗೂ ನಾವು ಈ ಮುಂದ್'ಗಳನ್ನು ಉಳಿಸಿ ಬೆಳೆಸಬೇಕಿದೆ ಎಂದರು. ವೇದಿಕೆಯಲ್ಲಿ ಕುತ್ತ್'ನಾಡ್ ತಕ್ಕ ಪಂದಿಮಾಡ ಅಚ್ಚಪ್ಪ, ಬೇರಳಿನಾಡ್ ತಕ್ಕ ಮಳವಂಡ ಭುವೇಶ್, ಗೌರವ ಕಾರ್ಯದರ್ಶಿ ನಾಳಿಯಮ್ಮನ ಉಮೇಶ್ ಕೇಚಮಯ್ಯ, ಸಹಕಾರ್ಯದರ್ಶಿ ಅಪ್ಪಂಡೇರAಡ ಮನು ಮೋಹನ್ ಸೇರಿದಂತೆ ಮೂರು ನಾಡಿನ ಊರು ತಕ್ಕರು ಉಪಸ್ಥಿತರಿದ್ದರು.
ಬೆಳಿಗ್ಗೆ ೧೦ ಗಂಟೆಗೆ ಮೂರು ನಾಡಿನವರು ಆಯಾಯ ಮಂದ್'ಗಳಲ್ಲಿ ಕೋಲ್ ಹೊಡೆದು ಬಳಿಕ ಪ್ರಮುಖ ಮಂದ್'ನಲ್ಲಿ ಸಾಂಪ್ರದಾಯಿಕ ಮಂದ್ ಹಿಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೂರು ನಾಡಿನವರು ಮೂರು ಕಡೆಯಿಂದ ಪಟ್ಟ್ (ರೇಷ್ಮೆ ವಸ್ತç) ಹಿಡಿದು ಓಡಿಬಂದು ಮಂದ್ ಮಧ್ಯಭಾಗದಲ್ಲಿರುವ ಮರಕ್ಕೆ ಕೋಲ್ ಹೊಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮೂರು ನಾಡಿನವರು ಒಂದು ಸುತ್ತಿನ ಸಾಮೂಹಿಕ ಪುತ್ತರಿ ಕೋಲಾಟ್ ನಡೆಸಿ ಸಾರ್ವಜನಿಕವಾಗಿ ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಲಾ ಯಿತು. ಈ ಸಂದರ್ಭದಲ್ಲಿ ಉಮ್ಮ ತಾಟ್, ಬೊಳಕಾಟ್, ಕತ್ತಿಯಾಟ್, ಪರೆಯಕಳಿ, ಬಾಳೋಪಾಟ್, ಪುತ್ತರಿ ಕೋಲಾಟ್, ವಾಲಗತ್ತಾಟ್, ಕೊಡವ ಪಾಟ್ ಪೈಪೋಟಿ, ಸಾಮೂಹಿಕ ನೃತ್ಯ ಸೇರಿದಂತೆ ಬುಡಕಟ್ಟು ಸಮುದಾಯದ ಯರವಾಟ್ ಹಾಗೂ ಚೀನಿದುಡಿ ನುಡಿಸುವ ಪೈಪೋಟಿ ಕಾರ್ಯಕ್ರಮ ನಡೆಯಿತು. ಮೂರು ನಾಡಿನವರಿಗೆ ಸೀಮಿತವಾಗಿ ಹಗ್ಗಜಗ್ಗಾಟ ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಗಮನ ಸೆಳೆಯಿತು. ಮಧ್ಯಾಹ್ನ ಸಹಭೋಜನ ವ್ಯವಸ್ಥೆಯೊಂದಿಗೆ ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ ಮಂದ್'ನಲ್ಲಿ ಕೊಡವ ಶ್ರೀಮಂತ ಸಂಸ್ಕೃತಿಯ ಅನಾವರಣವಾಯಿತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳು ಸೇರಿದಂತೆ ವಿವಿಧ ಮಂದ್ ಹಾಗೂ ಸಂಘ ಸಂಸ್ಥೆಗಳ ತಂಡಗಳು ಗಮನ ಸೆಳೆಯುವ ಮೂಲಕ ಬಹುಮಾನ ಗಳನ್ನು ಪಡೆದರು.