ಮಡಿಕೇರಿ, ಡಿ. ೫ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಂಡಿಸಿದ ಹಕ್ಕೊತ್ತಾಯದ ಹಿನ್ನೆಲೆಯಲ್ಲಿ ಡಾ.ದ್ವಾರಕನಾಥ್ ಆಯೋಗದ ವರದಿ ಮತ್ತು ಕರ್ನಾಟಕ ರಾಜ್ಯ ಶ್ರೇಷ್ಠ ನ್ಯಾಯಾಲಯದ ಸ್ಪಷ್ಟ ನಿರ್ದೇಶನವಿದ್ದರೂ ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು ``ಕೊಡವ'' ಎಂದು ನಮೂದಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಎರಡು ತಿಂಗಳು ಕಳೆದಿದ್ದರೂ ಸರ್ಕಾರದ ಸಾಫ್ಟ್ವೇರ್‌ನಲ್ಲಿ ಈ ಬದಲಾವಣೆಯನ್ನು ನಮೂದಿಸಿಲ್ಲ. ಇದರಿಂದ ಕೊಡವರಿಗೆ ದಾಖಲೆಗಳನ್ನು ಪಡೆಯುವ ಸಂದರ್ಭ ಅನ್ಯಾಯವಾಗುತ್ತಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಈ ವಿಚಾರದಲ್ಲಿ ಆಡಳಿತ ನಿರ್ಲಕ್ಷö್ಯ ವಹಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಳೆದ ೧೪ ವರ್ಷಗಳಿಂದ ಸಿಎನ್‌ಸಿ ಸಂಘಟನೆ ನಡೆಸಿದ ಹೋರಾಟದ ಫಲವಾಗಿ ನ್ಯಾಯಾಲಯ ನೀಡಿದ ಆದೇಶದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು ``ಕೊಡವ'' ಎಂದು ನಮೂದಿಸಲು ಅಧಿಕೃತ ಸೂಚನೆಯನ್ನು ನೀಡಿದೆ. ಆದರೆ ಇದುವರೆಗೂ ಈ ಪ್ರಕ್ರಿಯೆ ಜಾರಿಯಾಗಿಲ್ಲ. ಇದು ಸಾಂವಿಧಾನಿಕ ಮತ್ತು ಆಡಳಿತಾತ್ಮಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

``ಕೊಡವ'' ನಾಮಕರಣವನ್ನು ಸಾಫ್ಟ್ವೇರ್‌ಗೆ ಅಪ್‌ಲೋಡ್ ಮಾಡಿ ``ಕೊಡಗರು'' ಪದ ಬಳಕೆಯನ್ನು ಕೈಬಿಟ್ಟು ಆಡಳಿತ ಲೋಪ ಸರಿಪಡಿಸಬೇಕು. ಮತ್ತಷ್ಟು ವಿಳಂಬವಿಲ್ಲದೆ ``ಕೊಡವ'' ಶಾಸ್ತಿçÃಯ ನಾಮಕರಣವನ್ನು ಸಾಫ್ಟ್ವೇರ್‌ಗೆ ಅಪ್‌ಲೋಡ್ ಮಾಡುವ ಮೂಲಕ ಡಾ. ದ್ವಾರಕನಾಥ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜ್ಞಾಪನ ಪತ್ರದ ಪ್ರತಿಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರು ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರುಗಳಿಗೆ ಕಳುಹಿಸಿಕೊಡಲಾಗಿದೆ ಎಂದು ನಾಚಪ್ಪ ಮಾಹಿತಿ ನೀಡಿದರು.