*ಗೋಣಿಕೊಪ್ಪ, ಡಿ. ೬: ಕೃಷಿಯಲ್ಲಿ ಆಸಕ್ತಿ ಕಳೆದುಕೊಂಡರೆ ಮಾನವ ಕುಲದ ವಿನಾಶಕ್ಕೆ ಆಹ್ವಾನ ಎಂದು ಶಿವಮೊಗ್ಗ ಕೆ.ಶಿ.ನಾ.ಕೃ.ತೋ.ವಿ.ವಿ ಸಂಶೋಧನಾ ನಿರ್ದೇಶಕ ಡಾ. ಬಿ.ಎಂ. ದುಷ್ಯಂತ್ ಕುಮಾರ್ ಅಭಿಪ್ರಾಯಪಟ್ಟರು.

ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಆವರಣದಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ, ವಿಶ್ವ ಮಣ್ಣು ದಿನಾಚರಣೆಯ ಅಂಗವಾಗಿ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ಪೊನ್ನಂಪೇಟೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕ, ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ. ಇಲಾಖೆಗಳು, ವೀರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಂತ್ರಜ್ಞಾನಗಳೊAದಿಗೆ ದೇಶ ಎಷ್ಟೇ ಮುಂದುವರಿಯುತ್ತಿದ್ದರೂ, ಕೃಷಿ ಇಲ್ಲದಿದ್ದರೆ ಮಾನವನ ಬದುಕು ಸಾಧ್ಯವಿಲ್ಲ. ಹೀಗಾಗಿ ಕೃಷಿಗೆ ಹೆಚ್ಚು ಉತ್ತೇಜನ ನೀಡಬೇಕಾಗಿದೆ. ಯುವ ಸಮುದಾಯ ಆದಾಯವಿಲ್ಲದಿದ್ದರೂ, ಭತ್ತದ ಕೃಷಿಯತ್ತ ಹೆಚ್ಚು ಆಸಕ್ತರಾಗಬೇಕು ಎಂದು ಕರೆ ನೀಡಿದರು. ಪೊನ್ನಂಪೇಟೆ ಸಂಶೋಧನಾ ಕೇಂದ್ರದಲ್ಲಿ ಬೆಂಕಿ ರೋಗ ನಿರ್ವಹಣೆಗೆ ೨ ಸಾವಿರ ತಳಿಗಳ ಅಧ್ಯಾಯನ ನಡೆಯುತ್ತಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಭತ್ತ ಬೆಳೆಯಲು ಮುಂದಾಗಬೇಕೆAದು ಸಲಹೆ ನೀಡಿದರು.

ಶಿವಮೊಗ್ಗ ಕೆ.ಶಿ.ನಾ.ಕೃ.ತೋ.ವಿ.ವಿ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ ಗುರುಮೂರ್ತಿ ಮಾತನಾಡಿ, ಮಣ್ಣಿನ ಆರೋಗ್ಯದಿಂದ ಫಲವತ್ತತೆಯನ್ನು ಕಾಪಾಡಿಕೊಂಡಾಗ ಉತ್ತಮ ಕೃಷಿ ಸಾಧನೆ ಸಾಧ್ಯವಾಗಬಲ್ಲದು. ಇತ್ತೀಚಿನ ಬೆಳವಣಿಗೆಯಲ್ಲಿ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಇದರಿಂದ ಪೌಷ್ಠಿಕ ಬೆಳೆಗಳನ್ನು ತೆಗೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಮಾನವನ ಆರೋಗ್ಯ ಮತ್ತು ಬೆಳವಣಿಗೆಯ ಮೇಲೂ ದುಷ್ಪರಿಣಾಮ ಬೀರುತ್ತಿದೆ. ದೇಶ ಅಭಿವೃದ್ಧಿ ಕಾಣಲು ಮಣ್ಣಿನ ಫಲವತ್ತತೆಯು ಕಾರಣವಾಗಬಲ್ಲದು ಎಂದು ತಿಳಿಸಿದರು.

ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಜಿ.ಎಮ್. ದೇವಗಿರಿ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ, ಡಾ. ಸೋಮಸುಂದರ್ ಕೆ.ಎಂ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಸ್ತರಣಾ ಅಧಿಕಾರಿ ದಿನೇಶ್, ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಪ್ರಭಾಕರ್, ಮೂಡಿಗೆರೆ ವಲಯ ಕೃಷಿ, ತೋಟಗಾರಿಕಾ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಡಿ. ಮಾದಯ್ಯ, ಪೊನ್ನಂಪೇಟೆ ಕೃ.ತೋ.ಸಂ. ಕೇಂದ್ರದ ಕ್ಷೇತ್ರ ಅಧೀಕ್ಷಕ ಇಮ್ರಾನ್ ಖಾನ್, ಮಡಿಕೇರಿ ಕೇಂದ್ರ ಕ್ಷೇತ್ರ ಅಧೀಕ್ಷಕ ಡಾ. ಚಂದ್ರಶೇಖರ್ ಎಸ್.ವೈ, ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್.ಎನ್. ಕೆಂಚರೆಡ್ಡಿ ಇದ್ದರು.

ನಂತರದ ವಿಚಾರಗೋಷ್ಠಿಯಲ್ಲಿ ಚೆಟ್ಟಳ್ಳಿ ಮಣ್ಣು ವಿಜ್ಞಾನಿ, ಕಾಫಿ ಸಂಶೋಧನಾ ಉಪಕೇಂದ್ರದ ಡಾ. ನದಾಫ್ ಎಸ್.ಎ ಮಣ್ಣಿನ ಸಾರ ಸಂರಕ್ಷಣೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾಫಿ ತೋಟದಲ್ಲಿ-ಹಣ್ಣು ಮತ್ತು ಔಷಧಿಯ ಬೆಳೆಗಳ ಬೇಸಾಯ, ಆಧುನಿಕ ಸಮಗ್ರ ಕೃಷಿ ಪದ್ಧತಿಗಳು, ಆಧುನಿಕ ಕೃಷಿ-ಅರಣ್ಯ ಪದ್ಧತಿಗಳು, ಕೃಷಿ ಉಪಕಸುಬುಗಳ ವಿಚಾರವನ್ನು ವಿಜ್ಞಾನಿಗಳು ಮಂಡಿಸಿದರು.