ಕುಶಾಲನಗರ, ಡಿ. ೬: ಕುಶಾಲನಗರ ಶ್ರೀ ಗಣಪತಿ ರಥೋತ್ಸವ ಅಂಗವಾಗಿ ಮಂಗಳವಾರ ದೇವರಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.
ಕಾವೇರಿ ನದಿ ತೀರದಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನಿನ್ನೆ ರಾತ್ರಿ ನಡೆಯಿತು. ಸ್ಥಳೀಯರಾದ ಎನ್ ನವೀನ್ ಕುಮಾರ್ ಮತ್ತು ಎನ್ ನಿರಂಜನ್ ಕುಮಾರ್ ಅವರ ಕುಟುಂಬ ಸದಸ್ಯರ ಸೇವಾರ್ಥ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ದೇವಸ್ಥಾನ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು, ರಾಘವೇಂದ್ರ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆದವು.
ದೇವಾಲಯ ಕಾರ್ಯಕಾರಿ ಮಂಡಳಿ ಕಾರ್ಯಾಧ್ಯಕ್ಷರಾದ ಎಂ.ಕೆ. ದಿನೇಶ್, ನಿರ್ದೇಶಕರಾದ ವಿ.ಡಿ. ಪುಂಡರಿಕಾಕ್ಷ, ಕೆ.ಎನ್. ದೇವರಾಜು ಎಚ್.ಎಂ. ಚಂದ್ರು, ಡಿ.ಸಿ. ಜಗದೀಶ್, ವ್ಯವಸ್ಥಾಪಕರಾದ ಎಸ್.ಕೆ. ಶ್ರೀನಿವಾಸ್ ರಾವ್ ಮತ್ತಿತರರು ಇದ್ದರು. ಜಾತ್ರೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಏಂಜಲ್ ವಿಂಗ್ಸ್ ಸ್ಕೂಲ್ ಆಫ್ ಡಾನ್ಸ್ ತಂಡದಿAದ ನಾಟ್ಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು. ತಂಡದ ಸದಸ್ಯರಿಂದ ವಿವಿಧ ನೃತ್ಯ ಪ್ರಕಾರಗಳ ಪ್ರದರ್ಶನ ಜರುಗಿತು.