ಮುಳ್ಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಸಮೀಪದ ಶನಿವಾರಸಂತೆ ಚೆಸ್ಕಾಂ ಶಾಖಾ ಕಚೇರಿಯಲ್ಲಿ ಆಚರಿಸಲಾಯಿತು. ಶಾಖಾಧಿಕಾರಿ ಸುದೀಪ್‌ಕುಮಾರ್ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ದಿನದ ಮಹತ್ವ ಕುರಿತು ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಚಿಂತನೆ, ಆದರ್ಶಗಳು ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿದ್ದು, ಅವರು ದೇಶದ ಕುರಿತು ಕಂಡಿದ್ದ ಕನಸು ನನಸಾಗಿಸಲು ರಾಷ್ಟçದ ಪ್ರತಿಯೊಬ್ಬ ಪ್ರಜೆಯೂ ಬದ್ಧರಾಗಬೇಕಿದ್ದು, ಈ ನಿಟ್ಟಿನಲ್ಲಿ ನಾವೆಲ್ಲಾರೂ ಅವರು ಕಂಡಿದ್ದ ಕನಸು ಸಾಕಾರಗೊಳಿಸಲು ಬದ್ಧರಾಗಿರೋಣ ಎಂದು ಹೇಳಿದರು.

ಈ ಸಂದರ್ಭ ಸಹಾಯಕಾಧಿಕಾರಿ ದೀಪಕ್, ಕಚೇರಿಯ ಮಲ್ಲೇಶ್, ರಘು, ಮಹೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಕಕ್ಕಬೆ ವಸತಿ ಶಾಲೆಚೆಯ್ಯಂಡಾಣೆ: ಕಕ್ಕಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಶಿಕ್ಷಕಿ ಕವಿತಾ, ಅಶ್ವಿನಿ, ವಿದ್ಯಾರ್ಥಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕುಶಾಲನಗರದ ಟೌನ್ ಕಾಲೋನಿಚೆಯ್ಯಂಡಾಣೆ: ಕಕ್ಕಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಶಿಕ್ಷಕಿ ಕವಿತಾ, ಅಶ್ವಿನಿ, ವಿದ್ಯಾರ್ಥಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕುಶಾಲನಗರದ ಟೌನ್ ಕಾಲೋನಿಕುಶಾಲನಗರ: ಕುಶಾಲನಗರದ ಟೌನ್ ಕಾಲೋನಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಡಾ. ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆಯನ್ನು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಹೋಬಳಿ ಸಮಿತಿ ವತಿಯಿಂದ ಆಚರಿಸಲಾಯಿತು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ನಂತರ ಮಾತನಾಡಿದ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ. ರಾಜು, ಸಂವಿಧಾನ ಬರೆದುಕೊಟ್ಟು ದಾರಿದೀಪವಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಗಲಿ ೬೭ ವರ್ಷ ಕಳೆದಿವೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪಣತೊಡಬೇಕು ಎಂದರು.

ಸಮಿತಿಯ ಜಿಲ್ಲಾ ಅಧ್ಯಕ್ಷ ಬಿ.ಎಸ್. ರಮೇಶ್, ಪ್ರಧಾನ ಕಾರ್ಯದರ್ಶಿ ಸುಂದರ್ ದಾಸ್, ದಸಂಸ ಉಪಾಧ್ಯಕ್ಷರಾದ ಕೆ. ರವಿ, ಕೆ.ಜೆ. ಸಾವಿತ್ರಮ್ಮ, ಕೆ.ಜೆ. ಶಿವರಾಜ್, ಕುಶಾಲನಗರ ಹೋಬಳಿ ಅಧ್ಯಕ್ಷ ಆರ್. ಮಂಜುನಾಥ್, ಸೂರ್ಯ, ದೀಕ್ಷಿತ್ ಇದ್ದರು.