ಮಡಿಕೇರಿ, ಡಿ. ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೭ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮ ಬುಧವಾರ ನಡೆಯಿತು.
ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಐಟಿಡಿಪಿ ಅಧಿಕಾರಿ ಎಸ್.ಹೊನ್ನೇ ಗೌಡ, ಜಿಲ್ಲಾ ಖಜಾನೆ ಅಧಿಕಾರಿ ಬಿ.ಎನ್.ರಘುನಾಥ್, ಪೌರಾಯುಕ್ತ ರಾದ ವಿಜಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾದ ಪುಟ್ಟರಾಜು, ತಹಶೀಲ್ದಾರ್ ಪ್ರವೀಣ್ ಕುಮಾರ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ, ಜಿಲ್ಲಾ ನೋಂದಣಾಧಿ ಕಾರಿ ಸಿದ್ದೇಶ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜ ಮಾತನಾಡಿ ಅಂಬೇಡ್ಕರ್ ಅವರು ರಾಷ್ಟçಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಭವಿಷ್ಯದಲ್ಲಿ ರಾಷ್ಟçವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು, ಜೊತೆಗೆ ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಸಹ ಪ್ರಸ್ತುತವಾಗಿವೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಶೋಷಿತ ಸಮಾಜಗಳು ಇತರರಂತೆ ಬದುಕು ಕಟ್ಟಿಕೊಳ್ಳಲು ಅಂಬೇಡ್ಕರ್ ಅವರು ಶ್ರಮಿಸಿದ್ದಾರೆ ಎಂದರು.