ಸಕಾಲದಲ್ಲಿ ಆಸ್ಪತ್ರೆ ಸೇರಿಸಿದ ಪೊಲೀಸರು

ಕುಶಾಲನಗರ, ಡಿ. ೮: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿಶೇಷ ಚೇತನ ಮಹಿಳೆಯನ್ನು ಸಕಾಲದಲ್ಲಿ ಕುಶಾಲನಗರ ಹೈವೇ ಪೆಟ್ರೋಲಿಂಗ್ ಸಿಬ್ಬಂದಿಗಳು ಚಿಕಿತ್ಸೆಗೆ ದಾಖಲಿಸಿ ಪ್ರಾಣ ಉಳಿಸಲು ನೆರವಾಗಿದ್ದಾರೆ.

ಸೀಗೆಹೊಸೂರು ಬಳಿಯ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಸಂದರ್ಭ ಅಂಗ ವೈಕಲ್ಯತೆ ಹೊಂದಿರುವ ಆಕೆಯ ಪತಿ ಮತ್ತು ಸ್ನೇಹಿತರು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬೈಕ್ ಮೂಲಕ ತೆರಳುತ್ತಿದ್ದ ದೃಶ್ಯ ಕಂಡು ಹೈವೇ ಪೆಟ್ರೋಲಿಂಗ್ ವಾಹನದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಸಂದೀಪ್ ಕುಮಾರ್ ರೈ ಮತ್ತು ಚಾಲಕ ಚಂದ್ರಶೇಖರ್ ಅವರು ಅವರುಗಳನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ತಕ್ಷಣ ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ದೊರೆಯುವಂತೆ ಮಾಡಿದ್ದು, ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

-ಸಿAಚು