ಪಾಲಿಬೆಟ್ಟ, ಡಿ. ೬: ಜಿಲ್ಲಾ ಹಾಗೂ ವೀರಾಜಪೇಟೆ ತಾಲೂಕು ಮತ್ತು ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚೆನ್ನಯ್ಯನಕೋಟೆ ಸರಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಹಿರಿಯ ಸಾಹಿತಿ ದಿ. ಎನ್. ರಾಮಕೃಷ್ಣ ಮತ್ತು ದಿ. ಬಿ.ಜಿ. ರಘುನಾಥ್ ನಾಯಕ್ ಜ್ಞಾಪಕಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಪ್ರೌಢಶಾಲಾ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಶಾಲಾ ಮುಖ್ಯ ಶಿಕ್ಷಕಿ ಕೆ.ಎ. ಕಾವೇರಮ್ಮ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆಯೊAದಿಗೆ ಕನ್ನಡ ಅಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದು ಹೇಳಿದರು. ಮಾಜಿ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡುತ್ತ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಪ್ರತಿಯೊಬ್ಬರು ಕನ್ನಡ ಸಾಹಿತ್ಯ ಅಭಿಮಾನದೊಂದಿಗೆ ಕನ್ನಡಪರ ಕಾರ್ಯಕ್ರಮಗಳಿಗೆ ಹೆಚ್ಚು ಸಹಕಾರ ನೀಡುವದರ ಮೂಲಕ ಕೈಜೋಡಿಸಬೇಕೆಂದು ಹೇಳಿದರು.
‘ಕನ್ನಡ ರಾಜ್ಯೋತ್ಸವ’ ಎಂಬ ವಿಷಯದ ಮೇಲೆ ಸಾಹಿತಿ ರಜಿತ ಕಾರ್ಯಪ್ಪ ಹಾಗೂ ಕನ್ನಡ ಸೇವೆಯಲ್ಲಿ ಪೂರ್ವಾಧ್ಯಕ್ಷರ ಸೇವೆ ಎಂಬ ವಿಚಾರವಾಗಿ ಬಿ.ಜಿ.ಎಸ್. ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಉಮಾರಾಣಿ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆಯಿತು. ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ಹೆಚ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ, ಚೆನ್ನಯ್ಯನಕೋಟೆ ಗ್ರಾ.ಪಂ. ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್, ಪ್ರೌಢಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸಜಿತಾ, ಗ್ರಾ.ಪಂ. ಸದಸ್ಯರಾದ ಶೀಲಾ, ವಿಜು, ಪ್ರೌಢಶಾಲಾ ವಿಭಾಗದ ನಾಮನಿರ್ದೇಶಿತ ಸದಸ್ಯ ವೇಣು ಕುಮಾರ್, ಸಾಹಿತ್ಯ ಪರಿಷತ್ತಿನ ಸದಸ್ಯರಾದ ದಿನೇಶ್, ಯೋಗೇಶ್, ಭಾವ ಮಾಲ್ದಾರೆ ಹಾಗೂ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.