(ಹೆಚ್.ಕೆ. ಜಗದೀಶ್)
ಗೋಣಿಕೊಪ್ಪಲು, ಡಿ. ೭: ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅಧೀನದಲ್ಲಿ ಅತೀ ಕಡಿಮೆ ವೇತನಕ್ಕೆ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಮಾಸಿಕ ವೇತನ ಇಲ್ಲದೆ ೩ ತಿಂಗಳು ಕಳೆದಿವೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ೭೦೦ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಸಮಸ್ಯೆ ಎದುರಾಗಿದೆ.
ಬಹುಮುಖ್ಯವಾಗಿ ಸರ್ಕಾರದ ವತಿಯಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಾಸಿಕವಾಗಿ ಸಿಗುವ ಆಹಾರ ಸಾಮಗ್ರಿಗಳು ಕಳೆದ ೩ ತಿಂಗಳುಗಳಿAದ ಲಭ್ಯವಾಗುತ್ತಿಲ್ಲ. ವಿಶೇಷವಾಗಿ ಪೊನ್ನಂಪೇಟೆ ತಾಲೂಕಿನಲ್ಲಿ ಈ ಸಮಸ್ಯೆ ಗಂಭೀರವಾಗಿದ್ದು, ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ.
ಕಳೆದ ಹಲವು ದಶಕಗಳಿಂದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿನಿತ್ಯ ಮುಂಜಾನೆ ೯ ಗಂಟೆಯಿAದ ಸಂಜೆ ೪ ಗಂಟೆವರೆಗೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಲವು ಯೋಜನೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಬಹುದೊಡ್ಡ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರದಲ್ಲಿರುವ ಮಕ್ಕಳ, ಗರ್ಭಿಣಿಯರ ಹಾಗೂ ಬಾಣಂತಿಯರ ಅಂಕಿಅAಶಗಳನ್ನು ನಿಗದಿತ ನಮೂನೆಯಲ್ಲಿ ಸಮಯಕ್ಕೆ ಸರಿಯಾಗಿ ಇಲಾಖೆಗೆ ನೀಡುವುದಲ್ಲದೆ ಚುನಾವಣೆ ಸಂದರ್ಭ ಬಹುದೊಡ್ಡ ಜವಾಬ್ದಾರಿಯನ್ನು ವಹಿಸುವ ಮೂಲಕ ಮತದಾರರ ನೋಂದಣಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ.
ಮಾಸಿಕವಾಗಿ ಸಿಗುತ್ತಿರುವ ವೇತನವನ್ನೇ ನಂಬಿಕೊAಡು ಬಹುತೇಕ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ನಿಗದಿತ ಅವಧಿಯಲ್ಲಿ ಮಾಸಿಕ ವೇತನ ಲಭ್ಯವಾಗದ ಸಂದರ್ಭದಲ್ಲಿ ಸಹಜವಾಗಿಯೇ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳೊಂದಿಗೆ ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಈ ವೇಳೆ ಸಂಬAಧಿಸಿದ ಪದಾಧಿಕಾರಿಗಳು ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾ ಬರುತ್ತಿದ್ದಾರೆ.
ಕೇಂದ್ರದಲ್ಲಿ ಸಮಸ್ಯೆಗಳು ಎದುರಾದಾಗ ಹಾಗೂ ಇನ್ನಿತರ ಸಂದರ್ಭದಲ್ಲಿ ನ್ಯಾಯ ಪಡೆಯಲು ಹೋರಾಟದ ಹಾದಿ ಹಿಡಿಯುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬಹುತೇಕ ಸಮಸ್ಯೆಗಳನ್ನು ಹೋರಾಟದ ಮೂಲಕ ಸರ್ಕಾರಕ್ಕೆ ಒತ್ತಡ ಹೇರಿ ಪ್ರಯೋಜನ ಪಡೆದಿದ್ದರು.
(ಮೊದಲ ಪುಟದಿಂದ)
ಮೊಟ್ಟೆ, ತರಕಾರಿ ಸರಬರಾಜಿಲ್ಲ: ಪೊನ್ನಂಪೇಟೆ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೆಪ್ಟೆಂಬರ್ ತಿಂಗಳ ಆಹಾರ ಸಾಮಗ್ರಿಗಳು ಸರಬರಾಜು ಹೊರತುಪಡಿಸಿ ಇಲ್ಲಿಯ ತನಕ ಮೂರು ತಿಂಗಳ ಸಾಮಗ್ರಿಗಳು ಸರಬರಾಜಾಗಿಲ್ಲ. ಇದರೊಂದಿಗೆ ಮೊಟ್ಟೆ ಹಾಗೂ ತರಕಾರಿ ಖರೀದಿಗೆ ಹಣ ನೀಡುತ್ತಿಲ್ಲ. ಪ್ರಮುಖವಾಗಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮಾಸಿಕವಾಗಿ ಕುಂದುಕೊರತೆ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮಾರ್ಗೋಪಾಯವನ್ನು ಕಂಡುಕೊಳ್ಳಬೇಕು. ಆದರೆ ತಾಲೂಕಿಗೆ ನೂತನ ಅಧಿಕಾರಿ ಬಂದನAತರ ಈ ಕೆಲಸವನ್ನು ಮಾಡುವಲ್ಲಿ ನಿರಾಸಕ್ತಿ ವಹಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಹಿಂದೆ ಇದ್ದಂತಹ ಪ್ರಭಾರ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರಶಂಸೆ ಪಡೆದಿದ್ದರು. ಪ್ರತಿ ತಿಂಗಳ ಕೊನೆಯ ದಿನಾಂಕದ ಒಳಗೆ ಕಾರ್ಯಕರ್ತರಿಗೆ ಹಾಗೂ ಸಹಾಯಕರಿಗೆ ವೇತನವನ್ನು ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದಂತೆ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದ್ದರು. ನೂತನ ತಾಲೂಕು ಮಟ್ಟದ ಅಧಿಕಾರಿ ಇದೀಗ ಮಡಿಕೇರಿಯಿಂದ ಪ್ರಭಾರ ಅಧಿಕಾರಿಯಾಗಿ ನಿಯೋಜನೆಗೊಂಡಿರುವುದರಿAದ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಕಚೇರಿಯಲ್ಲಿ ಅಧಿಕಾರಿಗಳು ಸಕಾಲದಲ್ಲಿ ಲಭ್ಯವಿಲ್ಲದಿರುವುದರಿಂದ ಸಮಸ್ಯೆ ಇನ್ನಷ್ಟು ಉಲ್ಬಣವಾಗಲು ಕಾರಣವಾಗಿದೆ.