ಸೋಮವಾರಪೇಟೆ, ಡಿ. ೭: ಸೋಮವಾರ ಪೇಟೆ ತಾಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್. ಭಾಗ್ಯಮ್ಮ ಅವರು ಅಧಿಕಾರ ಸ್ವೀಕರಿಸಿದರು. ಇಲ್ಲಿನ ಬಿಇಓ ಕಚೇರಿಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮAಜೇಶ್ ಅವರಿಂದ ಅಧಿಕಾರ ಸ್ವೀಕರಿಸಿ, ನಂತರ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಚೇರಿಯ ಸಿಬ್ಬಂದಿಯೊAದಿಗೆ ಶೈಕ್ಷಣಿಕ ಹಾಗೂ ಆಡಳಿತ ವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿದರು.
ನಂತರ ಮಾತನಾಡಿದ ಅವರು, ಶಿಕ್ಷಕರ ಹುದ್ದೆ ಕೇವಲ ವೃತ್ತಿ ಅಲ್ಲ, ಅದೊಂದು ಶ್ರೇಷ್ಠ ಸೇವೆ. ಈ ದಿಸೆಯಲ್ಲಿ ಶಿಕ್ಷಕರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಿಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೋಶಾಧಿಕಾರಿ ಎ.ಸಿ. ಮಂಜುನಾಥ್, ಸಂಘದ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ಕಾರ್ಯದರ್ಶಿ ಟಿ.ವಿ. ಶೈಲಾ, ರಾಜ್ಯ ಪ್ರತಿನಿಧಿ ನವೀನ್, ಸಂಘದ ಪದಾಧಿಕಾರಿಗಳಾದ ಎಸ್. ನಾಗರಾಜ್, ಯಶವಂತ್, ಶ್ರೀಕಾಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎನ್. ಮಂಜುನಾಥ್, ಮಾಜಿ ಅಧ್ಯಕ್ಷ ಎಸ್.ಎ. ಯೋಗೇಶ್, ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜ್, ಪದಾಧಿಕಾರಿಗಳಾದ ಎಲ್.ಎಂ. ಪ್ರೇಮ ಉಮಾದೇವಿ, ಕವಿತ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಜಿ.ಎಂ. ಹೇಮಂತ್, ತಾಲೂಕು ದೈಹಿಕ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.