ನಾಪೋಕ್ಲು, ಡಿ. ೮: ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇಲ್ಲಿನ ಅಂಕುರ್ ಪಬ್ಲಿಕ್ ಶಾಲಾ ವತಿಯಿಂದ ಬುಧವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು. ಲಯನ್ಸ್ ಕ್ಲಬ್ನ ಅಂಗ ಸಂಸ್ಥೆಯಾದ ಲಿಯೋ ಕ್ಲಬ್ ಸದಸ್ಯ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಿದರು.
ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್, ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ, ಲಿಯೋ ಕ್ಲಬ್ ಸದಸ್ಯರು, ಅಂಕುರ್ ಪಬ್ಲಿಕ್ ಶಾಲೆಯ ಮುಖ್ಯಸ್ಥ ಕೇಟೋಳಿರ ರತ್ನ ಚರ್ಮಣ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು. ಈ ಸಂದರ್ಭ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.