ಮಡಿಕೇರಿ, ಡಿ. ೭: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ತಾ.೧೦ರಂದು ನಡೆಯಲಿದೆ.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಸಂಘದ ವತಿಯಿಂದ ಜನಾಂಗದ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟç, ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಕಾರ್ಯವನ್ನು ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ತಾ.೧೦ರಂದು ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿದ್ಯಾಸಂಘದ ಸಭಾಂಗಣದಲ್ಲಿ ಅಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ನಗರಸಭೆ ನಿವೃತ್ತ ಆಯುಕ್ತರಾದ ಮೂಟೇರ ಪುಷ್ಪಾವತಿ ಉದ್ಘಾಟನೆ ಮಾಡುವರು.

(ಮೊದಲ ಪುಟದಿಂದ) ಮುಖ್ಯ ಅತಿಥಿಗಳಾಗಿ ಮೈಸೂರು ರಂಗಾಯಣದ ಹಿರಿಯ ಕಲಾವಿದೆ ದೇವಜನ ಗೀತಾ ಮೋಂಟಡ್ಕ, ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತ ಶಿಕ್ಷಕಿ ಮಂಞAಡ್ರ ರೇಖಾ ಉಲ್ಲಾಸ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ ಪೊನ್ನಚನ ಮೋಹನ್, ನಿವೃತ್ತ ಶಿಶು ಅಭಿವೃದ್ಧಿ ಮೇಲ್ವಿಚಾರಕಿ ಸೂದನ ಎ. ಮೋಹಿನಿ, ಚೇರಂಬಾಣೆ ಗೌಡ ಸಮಾಜ ಅಧ್ಯಕ್ಷ ಕೊಡಪಾಲು ಗಣಪತಿ ಉಪಸ್ಥಿತರಿರುವರು ಎಂದು ತಿಳಿಸಿದರು.

ಈ ಬಾರಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ೩೧, ಪಿಯುಸಿಯಲ್ಲಿ ೧೩, ಸಿಇಟಿಯಲ್ಲಿ ೨, ನೀಟ್‌ನಲ್ಲಿ ೧, ಪದವಿಯಲ್ಲಿ ೩ ಮಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು. ಇದರೊಂದಿಗೆ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಸಾಧನೆ ಮಾಡಿದ ೧೪ ಮಂದಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೯ ಮಂದಿಯನ್ನು ಸನ್ಮಾನಿಸಲಾಗುವದು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ೧೯ ಮಂದಿಗೆ ಬಹುಮಾನ ನೀಡಲಾಗು ವದು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಮೆ ಸೀತಾರಾಂ, ಸಹ ಕಾರ್ಯದರ್ಶಿ ತಳೂರು ದಿನೇಶ್ ಕರುಂಬಯ್ಯ, ನಿರ್ದೇಶಕರುಗಳಾದ ಸೂದನ ಈರಪ್ಪ, ಕುಂಭಗೌಡನ ವಿನೋದ್‌ಕುಮಾರ್, ಪುದಿಯನೆರವನ ರೇವತಿ ರಮೇಶ್ ಉಪಸ್ಥಿತರಿದ್ದರು.