ಕುಶಾಲನಗರ, ಡಿ. ೭: ಕುಶಾಲನಗರ ಶ್ರೀ ಗಣಪತಿ ದೇವಾ ಲಯ ಜಾತ್ರೋತ್ಸವ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಬುಧವಾರದಂದು ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ದೇಸಿಯ ಜಾನಪದ ನೃತ್ಯ ಪ್ರಾಕಾರಗಳ ಪ್ರದರ್ಶನ ನಡೆಯಿತು.

ಗುಂಡೂರಾವ್ ಬಡಾವಣೆಯ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಪತಿ ದೇವಾಲಯ ಸೇವಾ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ಕೆ. ದಿನೇಶ್ ಮಾತನಾಡಿ, ಮುಂದಿನ ವರ್ಷಗಳಲ್ಲಿ ಜಾತ್ರೋತ್ಸವದ ಅಂಗವಾಗಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚಿಂತಿಸಲಾಗು ವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಬಳಗದ ಮೂಲಕ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಾAಸ್ಕೃತಿಕ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ಚಂದ್ರಮೋಹನ್ ಮಾತನಾ ಡಿದರು. ನಂತರ ನಡೆದ ನಿತ್ಯ ಪ್ರದರ್ಶನದಲ್ಲಿ ಕೊಡವ ಸಮಾಜದ ಮಹಿಳಾ ತಂಡದಿAದ ಉಮ್ಮತಾಟ್, ಹೆಬ್ಬಾಲೆ ಮಹಿಳಾ ಸಂಘ, ಶರಣ್ ಡ್ರೀಮ್ ಸ್ಟಾರ್, ಮಂಜು ಭಾರ್ಗವಿ ಹಾಗೂ ಕೂಡಿಗೆ, ಬಸವನಹಳ್ಳಿ ತಂಡದಿAದ ದೇಸಿಯ ಜನಪದ ನೃತ್ಯಗಳು ಪ್ರೇಕ್ಷಕರನ್ನು ರಂಜಿಸಿದವು. ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿಯ ಕಲಾವಿದೆ ಕು. ಸಂವೇದಿತ ಅವರನ್ನು ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ವಿ.ಎಸ್. ಆನಂದ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕೆÀ್ಷ ಕೆ.ಪಿ. ಚಂದ್ರಕಲಾ, ಸಾಂಸ್ಕೃತಿಕ ವೇದಿಕೆಯ ಸದಸ್ಯರಾದ ಚಂದನ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಿ, ಕನ್ನಡ ಸಿರಿ ಬಳಗದ ಹರೀಶ್ ಇದ್ದರು.

ಶಿಕ್ಷಕಿ ಮಾಲಾ ಮೂರ್ತಿ ನಿರೂಪಿಸಿ, ಹರೀಶ್ ಸ್ವಾಗತಿಸಿದರು.