ನಾಪೋಕ್ಲು, ಡಿ. ೮: ನಾಪೋಕ್ಲು ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಸುರಿದ ದಿಢೀರ್ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಧ್ಯಾಹ್ನದ ನಂತರ ಮಳೆ ಆರಂಭಗೊAಡಿತು. ಪಟ್ಟಣ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾಫಿ ಕೊಯ್ಲು ಆರಂಭಗೊAಡಿದ್ದು ಮಳೆಯಿಂದಾಗಿ ರೈತರು ಆತಂಕಕ್ಕೆ ಒಳಗಾದರು.
ವಿವಿಧೆಡೆ ಅರೇಬಿಕ ಕಾಫಿ ಬೆಳೆಯನ್ನು ಕೊಯ್ಲು ಮಾಡಲಾಗಿದ್ದು ಕಣದಲ್ಲಿ ಹರಡಲಾಗಿತ್ತು. ಬಿಸಿಲಿನ ತಾಪವೂ ಇಲ್ಲದೆ ಕಾಫಿಯನ್ನು ಒಣಗಿಸುವುದು ಕಷ್ಟಕರವಾಗಿದ್ದ ಸಂದರ್ಭದಲ್ಲಿ ಮಳೆ ಸುರಿದು ರೈತರನ್ನು ಮತ್ತಷ್ಟು ಆತಂಕಕ್ಕೆ ದೂಡಿತು. ಭತ್ತದ ಕೃಷಿ ಕೈಗೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖಗೊಳ್ಳುತ್ತಿದ್ದು, ಕೆಲವೇ ಕೆಲವು ರೈತರು ಅಲ್ಲಲ್ಲಿ ಭತ್ತದ ಕೃಷಿಯಲ್ಲಿ ತೊಡಗಿದ್ದಾರೆ. ಮಳೆಯಿಂದ ಭತ್ತದ ಇಳುವರಿಗೆ ಹಾನಿಯಾಗಿದೆ. ಅಲ್ಲಲ್ಲಿ ಕೊಯ್ಲು ಮಾಡಲಾಗಿದ್ದು, ಮಳೆಯಿಂದಾಗಿ ಭತ್ತದ ಪೈರುಗಳು ನೆನೆದು ಹೋಗಿವೆ. ವರ್ಷಪೂರ್ತಿ ಆತಂಕದಿAದಲೇ ದಿನದೂಡುವಂತಾಗಿದೆ ಎಂದು ರೈತರು ಕಳವಳ ವ್ಯಕ್ತಪಡಿಸಿದ್ದಾರೆ.
-ದುಗ್ಗಳ