ಮಡಿಕೇರಿ, ಡಿ. ೭: ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದಂತೆ ಮಡಿಕೇರಿ ನಗರಸಭೆಗೆ ಸೀನಿಯರ್ ಪ್ರೋಗ್ರಾಮರ್-ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ನ್ನು ಹೊರಗುತ್ತಿಗೆ-ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ ಉಳ್ಳವರು ಸ್ವಯಂ ಅರ್ಜಿ ಮತ್ತು ದೃಢೀಕೃತ ದಾಖಲೆಗಳೊಂದಿಗೆ ತಾ. ೨೦ ರೊಳಗೆ ಅರ್ಜಿ ಸಲ್ಲಿಸಬೇಕು. ಇದು ಪೂರ್ಣವಾಗಿ ತಾತ್ಕಾಲಿಕ ಹೊರಗುತ್ತಿಗೆ ಹುದ್ದೆಯಾಗಿರುತ್ತದೆ.
ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್)/ ಬಿಸಿಎ, ಎಂಎಸ್ಸಿ (ಕಂಪ್ಯೂಟರ್ ಸೈನ್ಸ್) ಅಥವಾ ಬಿಇ (ಕಂಪ್ಯೂಟರ್ ಸೈನ್/ಐಟಿ/ಎಂಸಿಎ) ವಿದ್ಯಾರ್ಹತೆ ಹೊಂದಿರಬೇಕು.
ನಿಗದಿತ ಮಾಸಿಕ ಕನಿಷ್ಟ ವೇತನ ರೂ. ೨೦೫೮೪ ಆಗಿರುತ್ತದೆ. ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸುವವರು ಮಾತ್ರ ಸೇವಾ ಶುಲ್ಕವನ್ನು ನಮೂದಿಸುವುದು. ಈ ನಿಗದಿತ ವೇತನವು ಪ್ರಥಮ ವರ್ಷಕ್ಕೆ ನಿಗದಿ ಯಾಗಿದ್ದು, ಮುಂದಿನ ವರ್ಷಗಳಿಗೆ ಸರ್ಕಾರವು ನಿಗದಿಪಡಿಸಿರುವಂತೆ-ಪಡಿಸುವAತೆ ಸೇವೆಯನ್ನು ಆಧರಿಸಿ ಪರಿಷ್ಕರಿಸಲಾಗುವುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.