ಕುಶಾಲನಗರ, ಡಿ. ೯: ರಾಜ್ಯದಲ್ಲಿ ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸುವಂತೆ ಕುಶಾಲನಗರ ವಕೀಲರ ಸಂಘ ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು ನೇತೃತ್ವದಲ್ಲಿ ವಕೀಲರು ಮಾನವ ಸರಪಳಿ ರಚಿಸಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಲಬುರಗಿಯಲ್ಲಿ ವಕೀಲ ಹಿರಣ್ಣ ಗೌಡ ಪಾಟೀಲ್ ಎಂಬವರನ್ನು ಕೊಲೆ ಮಾಡಿರುವ ಕೃತ್ಯವನ್ನು ಖಂಡಿಸಿದರು.

ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಎಂದು ನಾಗೇಂದ್ರ ಬಾಬು ಒತ್ತಾಯಿಸಿದರು.

ಮುಖ್ಯಮಂತ್ರಿ, ಗೃಹಮಂತ್ರಿ ಮತ್ತು ಕಾನೂನು ಮಂತ್ರಿಗಳು ಪ್ರಸಕ್ತ ನಡೆಯುತ್ತಿರುವ ಅಧಿವೇಶನದಲ್ಲೇ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಅಗ್ರಹಿಸಿದರು. ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರಿಗೆ ಪೊಲೀಸರು ಹಲ್ಲೆ ಮಾಡಿರುವುದನ್ನು ಖಂಡಿಸಿ ಮೈಸೂರು ಮಂಗಳೂರು ರಾಷ್ಟಿçÃಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯದರ್ಶಿ ಕೆ.ಬಿ. ಮೋಹನ್, ಉಪಾಧ್ಯಕ್ಷ ವೆಂಕಟರಮಣ ಭಟ್, ವಕೀಲರಾದ ಶಿವಮೂರ್ತಿ, ಎಸ್.ಕೆ. ಮಂಜುನಾಥ್, ಬಿ.ಎನ್. ಸಂತೋಷ್, ಜೆ.ಜೆ. ನವೀನ್, ವಿ.ಆರ್. ನಂದ, ಕೆ.ಎ. ವೇದ, ಎಂ.ಜೆ. ರೂಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.